ಇದೇ ಫೆಬ್ರವರಿ 16ರಂದು ನಟ ಡಾಲಿ ಧನಂಜಯ್, ಡಾ.ಧನ್ಯತಾ ಅವರ ಮದುವೆ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ ಆಯೋಜಿಸಲಾಗಿದೆ.
ಮಧುಮೇಹಿಗಳೇ ಗಮನಿಸಿ: ತೆಂಗಿನ ಹಾಲು ಕುಡಿದ್ರೆ ಶುಗರ್ ಕಂಟ್ರೋಲ್ ಆಗುತ್ತಂತೆ!
ತಮ್ಮ ಮದುವೆಯ ಬಗ್ಗೆ ಹಾಗೂ ಭಾವಿ ಪತ್ನಿ ಧನ್ಯತಾ ಅವರನ್ನು ಪರಿಚಯಿಸುವ ಸಲುವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರಿಗೆ ಎದುರಾದ ಪ್ರಶ್ನೆಗೆ ದರ್ಶನ್ ಅವರನ್ನು ಯಾಕೆ ಕರೆದಿಲ್ಲ ಎನ್ನುವುದು. ಇದಕ್ಕೆ ಕಾರಣವೂ ಇದೆ. ಅದೇನೆಂದರೆ, ದರ್ಶನ್ ನಟನೆಯ ‘ಯಜಮಾನ’ ಚಿತ್ರದಲ್ಲಿ ಡಾಲಿ ಧನಂಜಯ್ ಮಿಠಾಯಿ ಸೂರಿ ಎಂಬ ಪಾತ್ರದಲ್ಲಿ ನಟಿಸಿದ್ದರು. ಆ ಮಟ್ಟಿಗೆ ಇವರಿಬ್ಬರ ನಡುವೆ ಅನ್ಯೋನ್ಯತೆಯಿದೆ. ಆದರೆ, ದರ್ಶನ್ ಅವರನ್ನು ಆಹ್ವಾನಿಸದೇ ಇರುವುದು ಹಲವರ ಅನುಮಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ಅವರನ್ನು ಪತ್ರಿಕಾಗೋಷ್ಠಿಯಲ್ಲಿ ಕೇಳಲಾಗಿದೆ.
ಸದ್ಯ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಮದುವೆ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ ನಟ ಧನಂಜಯ್. ಈಗಾಗಲೇ ಮದುವೆಗೆ ಚಿತ್ರರಂಗ, ರಾಜಕೀಯ, ಕ್ರೀಡೆ, ಅಭಿಮಾನಿಗಳು ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರನ್ನು ಆಹ್ವಾನಿಸಿದ್ದರು. ಜೊತೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನ್ನು ಕೂಡ ಶೇರ್ ಮಾಡಿಕೊಂಡಿದ್ದರು.
ಅದರಂತೆ ಸುದ್ದಿಗೋಷ್ಠಿ ನಡೆಸಿದ ನಟ ಡಾಲಿಗೆ ನಟ ದರ್ಶನ್ರನ್ನು ಮದುವೆಗೆ ಆಹ್ವಾನಿಸದಿರುವ ಬಗ್ಗೆ ಪ್ರಶ್ನೆಯನ್ನು ಕೇಳಲಾಗಿದೆ. ಈ ಬಗ್ಗೆ ಮಾತಾಡಿದ ನಟ ಧನಂಜಯ್, ಎಲ್ಲರನ್ನೂ ಮದುವೆ ಕರೆಯುತ್ತಿದ್ದೇನೆ. ಅಂದ್ಮಲೆ ಅವರನ್ನು ಕರೆಯುವ ಪ್ರಯತ್ನ ಮಾಡಿರುತ್ತೇನೆ. ಆದರೆ, ಅವರನ್ನು ರೀಚ್ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ. ತುಂಬಾನೇ ಪ್ರೀತಿಯಿಂದ ಅವರನ್ನು ಇಲ್ಲಿಯಿಂದಲೇ ಕರೆಯುತ್ತೇನೆ ಎಂದು ಹೇಳಿದ್ದಾರೆ.
ಈ ಹಿಂದೆ ಡಾಲಿ ಅವರು ನಟ ದರ್ಶನ್ ಅವರ ಜೊತೆಗೆ ಆಪ್ತರಾಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೇ ಯಜಮಾನ ಸಿನಿಮಾದಲ್ಲಿ ಮಿಠಾಯಿ ಸೂರಿ ಪಾತ್ರದಲ್ಲಿ ನಟಿಸಿದ್ದರು ಡಾಲಿ. ಇಷ್ಟೇ ಅಲ್ಲದೇ ಹಲವಾರು ಪಾರ್ಟಿಗಳಲ್ಲಿ ಈ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು