ಮಂಗಳೂರು: ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಪರಿಷತ್ ಸದಸ್ಯ ರಾಜೇಶ್ ಬನ್ನೂರು ಅವರ ಮನೆಯನ್ನು ಧ್ವಂಸಗೊಳಿಸಿದ ಬಳಿಕ, ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. ಕಳೆದ ಬುಧವಾರ ರಾತ್ರಿ ಮಂಗಳೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ಪಶ್ಚಿಮ ಭಾಗದಲ್ಲಿ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮ ಮಾಡಲಾಗಿದೆ. ಮುಸುಕುಧಾರಿಗಳು ಮನೆ ಧ್ವಂಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮನೆ ಧ್ವಂಸದಿಂದಾಗಿ ನಾಯಿ ಮರಿ ಮಣ್ಣಿನಡಿ ಸಿಲುಕಿ ಸಾವನಪ್ಪಿದೆ. ಮನೆ ಧ್ವಂಸಗೊಳಿಸಿದ ಬಳಿಕ ಮುಸುಕುಧಾರಿಗಳು 32 ಗ್ರಾಂ ಚಿನ್ನ, ದಾಖಲೆ ಪತ್ರ ಸೇರಿದಂತೆ ಹಣವನ್ನು ಹೊತ್ತೊಯ್ದಿದ್ದಾರೆ ಎನ್ನಲಾಗುತ್ತಿದೆ. ಇನ್ನೂ, ಘಟನೆ ಬೆನ್ನಲ್ಲೇ ಈ ಹಿನ್ನಲೆ ಬಿಜೆಪಿ ಕಾರ್ಯಕರ್ತರು ಪುತ್ತೂರು ನಗರ ಪೋಲಿಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿ, ಪ್ರಕರಣ ದಾಖಲಿಸುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಶ್ರೀ ಸಿದ್ಧಾರೂಢ ಕಥಾಮೃತ ಗ್ರಂಥದ ಶತಮಾನೋತ್ಸವ ನಿಮಿತ್ತ ಶ್ರೀ ಸಿದ್ಧಾರೂಢ ಜ್ಯೋತಿ ರಥಯಾತ್ರೆ