ಬೆಂಗಳೂರು:- ಜಿಲ್ಲೆಯ ಆನೆಗೊಂದಿ ತೂಗು ಸೇತುವೆ ಕಾಮಗಾರಿ ನಷ್ಟ ಪರಿಹಾರ ಸಂಬಂಧ ಗುತ್ತಿಗೆದಾರರೊಬ್ಬರು ಸರ್ಕಾರಕ್ಕೆ ಸೆಡ್ಡು ಹೊಡೆದ ಪರಿಣಾಮ ಇದೀಗ ಮುಖ್ಯ ಕಾರ್ಯದರ್ಶಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. 6 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ 5000 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟ ವಿಶೇಷ ಪ್ರಕರಣ ಇದಾಗಿದೆ.
ಹೆಂಡತಿ ತವರು ಮನೆಗೆ ಹೋಗಿರೋದು ಖುಷಿ ಆಗಿದೆ: ಆಟೋ ಚಾಲಕನ ಪೋಸ್ಟರ್ ವೈರಲ್!
ರಾಜ್ಯದ ಗುತ್ತಿಗೆದಾರರೊಂದಿಗೆ ಕಾನೂನು ಸಂಘರ್ಷ ಎದುರಾಗಿದ್ದು, 5,219 ಕೋಟಿ ರೂಪಾಯಿ ಪರಿಹಾರ ಕೊಡಬೇಕು ಎಂದು ಅವರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಗುತ್ತಿಗೆದಾರನ ವರಸೆ ಕಂಡು ಕಂಗಾಲಾದ ಸಾರ್ವಜನಿಕ ಲೆಕ್ಕಪತ್ರ ಸಮಿತಿ, ಮಧ್ಯಸ್ಥಿಕೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಿದೆ.
24-09-2024 ರಲ್ಲಿ 4645.59 ಕೋಟಿ ರೂ. ಪರಿಹಾರಕ್ಕೆ ಗುತ್ತಿಗೆದಾರ ಮನವಿ ಪತ್ರ ಸಲ್ಲಿಸಿದ್ದರು. ಜಿಲ್ಲಾ ನ್ಯಾಯಾಲಯದ ತೀರ್ಪಿನ ಮೊತ್ತವನ್ನು ಗುತ್ತಿಗೆದಾರರು ಹೆಚ್ಚಳ ಮಾಡಿ ಭಾರಿ ಮೊತ್ತದ ಪರಿಹಾರ ಕೋರುತ್ತಿರುವುದರಿಂದ ಈ ಬಗ್ಗೆ ಯಾವುದೇ ಕ್ರಮ ವಹಿಸಲಾಗಿರುವುದಿಲ್ಲ. ಈ ನಡುವೆ ಗುತ್ತಿಗೆದಾರರು ಕೊಪ್ಪಳ ನ್ಯಾಯಾಲಯದಲ್ಲಿ ಹೂಡಿದ 2021 ರ ಅಫಿಡೆವಿಟ್ಅನ್ನು ಮತ್ತೊಮ್ಮೆ 05-09-2024ರಂದು ಸಲ್ಲಿಸಿ 5219.76 ಕೋಟಿ ರೂ. ಮೊತ್ತಕ್ಕೆ ಮನವಿ ಸಲ್ಲಿಸಿರುತ್ತಾರೆ
ಇದೇ ವಿಚಾರಕ್ಕೆ ಕೋರ್ಟ್ ಶೋಕಾಸ್ ನೋಟೀಸ್ ನೀಡಲು ಹಾಗೂ ಪರಿಹಾರ ಮೊತ್ತವನ್ನು ಪಾವತಿಸದ ಕಾರಣ ಸಿವಿಲ್ ಬಂಧನಕ್ಕೆ ಆದೇಶ ನೀಡಿರುತ್ತಾರೆ.
ಇದೀಗ ಪ್ರಕರಣ ಸರ್ಕಾರದ ಲೆಕ್ಕಪತ್ರ ಸಮಿತಿ ಎದುರಿಗೆ ಬಂದಿದ್ದು, ಇಡೀ ಪ್ರಕರಣ ನೋಡಿ ಸಮಿತಿ ಸದಸ್ಯರು ದಿಗ್ಭ್ರಮೆಗೊಂಡಿದ್ದಾರೆ.