ಕೊಪ್ಪಳ: ಇತ್ತೀಚಿಗಷ್ಟೇ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಕನ್ನಡ ಬರೆಯಲು ಒದ್ದಾಡಿದ ವಿಡಿಯೋವೊಂದು ವೈರಲ್ ಆಗಿತ್ತು. ಇದೀಗ ಅದರ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜಿ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.
ಕೊಪ್ಪಳದಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಾನು ಬಿಎಸ್ಸಿ ಪದವೀಧರ, ಕನ್ನಡ ಬರೆಯಲು ಬಾರದಷ್ಟು ದಡ್ಡನಲ್ಲ. ಪೂರ್ತಿ ಬರೆಯುವವರೆಗೆ ಕಾಯುವ ತಾಳ್ಮೆ ಇಲ್ಲದವರು ವಿಡಿಯೋ ಮಾಡಿದ್ದಾರೆ. ನಾನು ಬೇರೆ ಏನೋ ಬರೆಯಲು ಮುಂದಾಗಿದ್ದೇ, ಆದರೆ ಅಲ್ಲಿದ್ದವರು ಶುಭವಾಗಲಿ ಎಂದು ಬರೆಯಲು ಹೇಳಿದ್ದರು ಆಗ ಭ ಅಕ್ಷರದಲ್ಲಿ ಸ್ವಲ್ಪ ತಪ್ಪಾಗಿತ್ತು ಎಂದಿದ್ದಾರೆ. ಆದರೆ ಅಕ್ಷರ ಬರೆಯಲಾರದ ಸ್ಥಿತಿಯಲ್ಲಿ ನಾನಿಲ್ಲ, ನನ್ನ ಬಗ್ಗೆ ಮಾತಾಡುವವರು ತಾಳ್ಮೆ ಪರೀಕ್ಷೆ ಮಾಡಬೇಡಿ. ಕಳೆದ ಹನ್ನೆರಡು ವರ್ಷಗಳಿಂದ ನಾನು ರಾಜಕೀಯದಲ್ಲಿ ಇದ್ದೇನೆ ಯಾವತ್ತಾದ್ರೂ ತಪ್ಪಾಗಿ ಕನ್ನಡ ಮಾತಾಡಿದ್ದೇನಾ..?, 2 ವರ್ಷ ಇಲಾಖೆ ಹೇಗೆ ನಿಭಾಯಿಸಿದ್ದೇನೆ ಎಂಬುದನ್ನು ನೋಡಿ ನನ್ನ ಕಾರ್ಯನಿರ್ವಹಣೆಗೆ ಸಾಹಿತಿಗಳೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ಬಿಜೆಪಿಯಲ್ಲಿ ಭಿನ್ನಮತದ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದೇನು..?