ಬೆಂಗಳೂರು:- ಬ್ಯಾಂಕ್ ವಂಚನೆ ಕೇಸ್ನಲ್ಲಿ ದೋಷಿ ಎಂದು ಸಾಬೀತಾಗಿರುವ ಹಿನ್ನೆಲೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಸೇರಿದ್ದಾರೆ.
ನೀತಿ ಹೇಳಬೇಕಾದವರಿಂದಲೇ ನೀಚ ಕೃತ್ಯ: 13 ವರ್ಷದ ಬಾಲಕಿ ಮೇಲೆ ಮೂವರು ಶಿಕ್ಷಕರಿಂದ ರೇಪ್!
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಕೋರ್ಟ್ ತೀರ್ಪು ನೀಡಿದೆ. ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ ತಪ್ಪಿತಸ್ಥರು ಎಂದು ಆದೇಶ ಹೊರಡಿಸಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟವಾಗಬೇಕಿದೆ.