ಸೌತ್ ಆಫ್ರಿಕಾದ ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್ ವಿಶ್ವ ದಾಖಲೆಗೆ ಕುತ್ತು ಬಂದಿದ್ದು, ದಾಖಲೆ ಮುರಿಯೋ ಸನಿಹದಲ್ಲಿ ಇಂಗ್ಲೆಂಡ್ ಬ್ಯಾಟರ್ ಇದ್ದಾರೆ.
ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ: ಆಸಿಸ್ ತಂಡದ ಐವರು ಸ್ಟಾರ್ ಆಟಗಾರರು ಔಟ್!
ಟಿ20 ಕ್ರಿಕೆಟ್ನಲ್ಲಿ ಅಲೆಕ್ಸ್ ಹೇಲ್ಸ್ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಬಾರಿ ಕೀರನ್ ಪೊಲಾರ್ಡ್ ಅವರ ವಿಶ್ವ ದಾಖಲೆ ಮುರಿದು ಮತ್ತೊಂದು ಭರ್ಜರಿ ರೆಕಾರ್ಡ್ನತ್ತ ಹೆಜ್ಜೆಯನ್ನಿಟ್ಟಿದ್ದಾರೆ. ಈ ಹೆಜ್ಜೆಯೊಂದಿಗೆ ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿರುವ ಸಾರ್ವಕಾಲಿಕ ಶ್ರೇಷ್ಠ ದಾಖಲೆಯೊಂದು ಅಲುಗಾಡಲಾರಂಭಿಸಿದೆ.
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ILT20 ಲೀಗ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಲೆಕ್ಸ್ ಹೇಲ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದುಬೈ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಡೆಸರ್ಟ್ ವೈಪರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಲೆಕ್ಸ್ ಹೇಲ್ಸ್ 32 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 67 ರನ್ ಸಿಡಿಸಿದ್ದಾರೆ.
ಈ 67 ರನ್ಗಳೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಅಲೆಕ್ಸ್ ಹೇಲ್ಸ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆಯ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ವೆಸ್ಟ್ ಇಂಡೀಸ್ನ ಕೀರನ್ ಪೊಲಾರ್ಡ್ ಇದ್ದರು.