ಪ್ರಯಾಗ್ ರಾಜ್:- ಮಹಾ ಕುಂಭಮೇಳದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.
ಮುಡಾ ಹಗರಣದ ತನಿಖೆ CBI ವಹಿಸಲು ಹೈಕೋರ್ಟ್ ನಕಾರ: ಹೆಚ್ ಸಿ ಮಹದೇವಪ್ಪ ಹೇಳಿದ್ದೇನು?
ನಗರದ ಸೆಕ್ಟರ್ 18ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ. ಸೆಕ್ಟರ್ 18ರ ತುಳಸಿ ಚೌರಾಹಾ ಬಳಿಕ ಕ್ಯಾಂಪ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಖಾಕ್ ಚೌಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ ಚತುರ್ವೇದಿ ತಿಳಿಸಿದ್ದಾರೆ
ಮಹಾ ಕುಂಭಮೇಳದಲ್ಲಿ 3ನೇ ಬಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಕಳೆದ ಜನವರಿ 30 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಕನಿಷ್ಠ 15 ಟೆಂಟ್ಗಳು ಭಸ್ಮವಾಗಿದ್ದವು