ಉತ್ತರ ಪ್ರದೇಶ:- ಮಧ್ಯಪ್ರದೇಶದ ಇಂದೋರ್ ಬಳಿ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವನ್ನಪ್ಪಿದ ಘಟನೆ ಜರುಗಿದೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರವಾಗುತ್ತಿದೆ: HD ದೇವೇಗೌಡ ಕಳವಳ!
ಟಿಟಿ ವಾಹನದಲ್ಲಿ 19 ಮಂದಿ ವಾಪಸಾಗುತ್ತಿದ್ದರು ಆಗ ಲಾರಿಗೆ ವಾಹನ ಡಿಕ್ಕಿ ಹೊಡೆದಿದೆ. ಬೆಳಗಾವಿಯ ನಾಲ್ವರು ಇಂದೋರ್ನ ಇಬ್ಬರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನ್ಪುರ ಪೊಲೀಸ್ ಠಾಣೆಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.