ಬೆಂಗಳೂರು:- ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಜಾನೆಗೆ ಬರಲೇಬೇಕು ಎಂದು ಆರ್ ಅಶೋಕ್ ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಅವರು ಮಾತನಾಡಿದರು. ಮುಡಾ ಕೇಸ್ ಸಿಬಿಐ ತನಿಖೆಗೆ ಕೊಡಲು ಹೈಕೋರ್ಟ್ ನಿರಾಕರಿಸಿದ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ ಮುಡಾ ಅಕ್ರಮದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.
ಮುಡಾ ಕೇಸ್ ತನಿಖೆ ಸಿಬಿಐಗೆ ಕೊಡಬೇಕು ಎಂಬ ಅರ್ಜಿಯನ್ನು ಹೈಕೋರ್ಟ್ ತಿರಸ್ಕಾರ ಮಾಡಿದೆ. ಈಗಾಗಲೇ ಲೋಕಾಯುಕ್ತ, ಇಡಿ ತನಿಖೆ ನಡೆಸುತ್ತಿದೆ. ಸದ್ಯ ಹೈಕೋರ್ಟ್ ಕೊಟ್ಟಿರೋ ತೀರ್ಪು ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಾಜಾನೆಗೆ ಬರುತ್ತೆ ಎಂಬ ನಂಬಿಕೆ ಇದೆ. ಕಾನೂನಿನ ಮೇಲೆ ನಮಗೆ ಗೌರವ ಇದೆ. ಮುಡಾ ಪ್ರಕರಣವನ್ನ ಸಿಬಿಐಗೆ ಕೊಡಬೇಕು ಎಂದು ನಾವು ಹೋರಾಟ ಮಾಡಿದ್ವಿ. ಮತ್ತೆ ಕಾನೂನು ಪ್ರಕಾರ ಏನು ಹೋರಾಟ ಮಾಡಬೇಕೋ ಅದನ್ನ ಮುಂದುವರೆಸುತ್ತೇವೆ ಎಂದಿದ್ದಾರೆ.
ಇದೇ ವೇಳೆ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಬಗ್ಗೆ ಪ್ರತಿಕ್ರಿಯಿಸಿ, ಈ ಕೇಸ್ನಲ್ಲಿ ಯಡಿಯೂರಪ್ಪಗೆ ಕೋರ್ಟ್ ರಿಲೀಫ್ ಕೊಟ್ಟಿದೆ. ತೀರ್ಪು ಸಮಾಧಾನ ತಂದಿದೆ ಎಂದರು.