ಫೆಬ್ರವರಿ 9 ರಂದು ಕಟಕ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ.
ಎನ್ಪಿಎಸ್ ರದ್ದತಿಗೆ ಸರ್ಕಾರಿ ನೌಕರರ ಪಟ್ಟು: ಬೆಂಗಳೂರಿನಲ್ಲಿ ಪ್ರತಿಭಟನೆ, ಕಚೇರಿಗಳು ಸ್ತಬ್ಧ!
ಈ ನಡುವೆ ಟೀಂ ಇಂಡಿಯಾಕ್ಕೆ ಕೊಂಚ ಸಮಾಧಾನಕರ ಸುದ್ದಿ ಸಿಕ್ಕಿದ್ದು, ಇಂಜುರಿಯಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ, ಎರಡನೇ ಪಂದ್ಯಕ್ಕೆ ಸಂಪೂರ್ಣ ಫಿಟ್ ಆಗಿದ್ದು, ತಂಡದಲ್ಲಿ ಆಡುವುದು ಖಚಿತ ಎಂದು ವರದಿಯಾಗಿದೆ.
ನಾಗ್ಪುರ ಏಕದಿನ ಪಂದ್ಯಕ್ಕೂ ಮುನ್ನ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಮೊಣಕಾಲಿಗೆ ಇಂಜುರಿಯಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆ ಬಳಿಕ ಪಂದ್ಯದಿಂದ ಹೊರಗುಳಿದಿದ್ದ ಕೊಹ್ಲಿ ಅವರ ಕಾಲಿಗೆ ಬ್ಯಾಂಡೇಜ್ ಸುತ್ತಿರುವುದು ಕೂಡ ಫೋಟೋ ಹಾಗೂ ವಿಡಿಯೋ ಮೂಲಕ ವೈರಲ್ ಆಗಿತ್ತು. ಮೊದಲ ಪಂದ್ಯದ ಟಾಸ್ ವೇಳೆ ಈ ಬಗ್ಗೆ ಮಾತನಾಡಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬಲಗಾಲಿನ ನೋವಿನಿಂದ ಬಳಲುತ್ತಿದ್ದು, ಅವರಿಗೆ ಮೊದಲ ಏಕದಿನ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ ಎಂದಿದ್ದರು.
ಚಾಂಪಿಯನ್ಸ್ ಟ್ರೋಫಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗುವುದರಿಂದ ಕೊಹ್ಲಿ ಎರಡನೇ ಏಕದಿನ ಪಂದ್ಯವನ್ನು ಆಡುವುದು ಅತ್ಯವಶ್ಯಕವಾಗಿದೆ. ಏಕೆಂದರೆ ಕೊಹ್ಲಿ ಕೂಡ ರೋಹಿತ್ರಂತೆ ಕಳೆದ ಕೆಲವು ದಿನಗಳಿಂದ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದಾರೆ. ಹೀಗಾಗಿ ಉಳಿದಿರುವ ಎರಡು ಪಂದ್ಯಗಳಲ್ಲಿ ಕೊಹ್ಲಿ ಆಡುವ ಮೂಲಕ ತಮ್ಮ ಹಳೆಯ ಲಯಕ್ಕೆ ಮರಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.