ಕೋಲಾರ : ಕಳೆದ ಎರಡು ತಿಂಗಳಿಂದ ಕೋಲಾರ ನಗರದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಅಂಗಡಿಗಳ ಶೆಟರ್ ಮುರಿದು ಸಿಕ್ಕ ಸಿಕ್ಕಿದ್ದನ್ನು ದೋಚಿ ಪರಾರಿಯಾಗುತ್ತಿದ್ದ ಮಂಕಿಕ್ಯಾಪ್ ಕಳ್ಳರ ಗ್ಯಾಂಗ್ ಜನರ ನಿದ್ದೆಗೆಡಿಸಿತ್ತು. ಸದ್ಯ ಬೆಂಗಳೂರಿನ ಮಂಕಿಕ್ಯಾಪ್ ಕಳ್ಳರ ಗ್ಯಾಂಗ್ನ ಮಾಸ್ಟರ್ ಮೈಂಡ್ ರೋಹಿತ್, ರಿಯಾನ್, ಪ್ರವೀಣ್ ಕುಮಾರ್, ವಿನೋದ್, ದಾದಾಪೀರ್ ಸೇರಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಒಟ್ಟು ಏಳು ಜನರನ್ನು ಕೋಲಾರ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅವರಿಂದ ಕೃತ್ಯಕ್ಕೆ ಬಳಸುತ್ತಿದ್ದ ಮೂರು ಬೈಕ್ಗಳು ಹಾಗೂ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪರಸ್ತ್ರೀ ಹಿಂದೆ ಬಿದ್ದ ಪತಿ.. ಸುಫಾರಿ ಕೊಟ್ಟು ಕಾಲು ಮುರಿಸಿದ ಪತ್ನಿ ..!? ; ಪೊಲೀಸರ ವಶಕ್ಕೆ
ಕೋಲಾರ ನಗರದಲ್ಲಿ ಡಿ.17 ರ ರಾತ್ರಿ ಹಾಗೂ ಜ.17ರ ರಾತ್ರಿ ಟೇಕಲ್ ರಸ್ತೆ, ಎಂ.ಬಿ.ರಸ್ತೆಯಲ್ಲಿನ ಆಧೀಶ್ವರ ಮಾರ್ಕೆಟಿಂಗ್, ಅಪೋಲೋ ಮೆಡಿಕಲ್ಸ್, ಸಲೂನ್, ದಿನಸಿ ಅಂಗಡಿ, ಮೊಬೈಲ್ ಅಂಗಡಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಅಂಗಡಿಗಳ ಶೆಟರ್ ಮುರಿದು ಸಾವಿರಾರು ರೂಪಾಯಿ ದೋಚಿ ಪರಾರಿಯಾಗಿದ್ದರು. ಇನ್ನು ಖತರ್ನಾಕ್ ಕಳ್ಳರ ಬೇಟೆಗಾಗಿ ಬಲೆ ಬೀಸಿದ್ದ ಕೋಲಾರ ನಗರ ಠಾಣಾ ಪೊಲೀಸರಿಗೆ ಖದೀಮರ ಕುರಿತ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಇದೇ ಗ್ಯಾಂಗ್ ಮತ್ತೊಂದು ಕಳ್ಳತನಕ್ಕೆ ತಯಾರಿ ನಡೆಸುತ್ತಿದ್ದ ವೇಳೆ ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಿಸಿದ ಪೊಲೀಸರಿಗೆ ಮಂಕಿಕ್ಯಾಪ್ ಕಳ್ಳರ ಗ್ಯಾಂಗ್ ಸಿಕ್ಕಿಬಿದ್ದಿದೆ.