ನವದೆಹಲಿ:- ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಎದೆಬಡಿತ ಹೆಚ್ಚಿಸುತ್ತಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿಗೆ 16 ಕ್ಷೇತ್ರಗಳಲ್ಲಿ ಆಪ್ ನೇರ ಪೈಪೋಟಿ ನೀಡುತ್ತಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಹಾರೂಗೇರಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮ: ತಂದೆ ಶವವಿಟ್ಟು ಇನ್ಸ್ಪೆಕ್ಟರ್ ಪ್ರತಿಭಟನೆ!
ಇನ್ನೂ ಮತ್ತೊಂದೆಡೆ ಫಲಿತಾಂಶಕ್ಕೂ ಮುನ್ನವೇ ಆಪ್ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದ್ದು, ಈ ಬಾರಿಯೂ ಗೆಲುವು ನಮ್ಮದೇ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಆಪ್ ಮಧ್ಯೆ ನೇರಾನೇರ ಸ್ಪರ್ಧೆಯಿದೆ. 18 ಕ್ಷೇತ್ರಗಳಲ್ಲಿ ಎರಡು ಪಕ್ಷಗಳ ನಡುವಿನ ಅಂತರ 2 ಸಾವಿರಕ್ಕೂ ಕಡಿಮೆಯಿದೆ. ಹೀಗಾಗಿ ಚುನಾವಣ ಮತ ಎಣಿಕೆ ಈಗ ರೋಚಕ ಘಟ್ಟಕ್ಕೆ ತಿರುಗಿದೆ.
ಬೆಳಗ್ಗೆ 9:30ರ ಟ್ರೆಂಡ್ ಪ್ರಕಾರ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿತ್ತು. ಆದರೆ ಬೆಳಗ್ಗೆ 11 ಗಂಟೆಯ ವೇಳೆಗೆ ಬಿಜೆಪಿ 41 ಆಪ್ 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿ ಮುನ್ನಡೆ ಪಡೆಯಲು ವಿಫಲವಾಗಿದೆ.
699 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರ ಸೇರಿತ್ತು. ಬಹುತೇಕ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿಗೆ ಅಧಿಕಾರ ದಕ್ಕಲಿದೆ ಎಂದು ಹೇಳಿವೆ. ಈ ಸಮೀಕ್ಷೆಗಳನ್ನು ಒಪ್ಪದ ಆಮ್ ಆದ್ಮಿ ಪಕ್ಷ ಬಿಜೆಪಿ ವಿರುದ್ಧವೇ ಆಪರೇಷನ್ ಕಮಲದ ಆರೋಪ ಮಾಡಿದೆ.
ರಿಸಲ್ಟ್:-
ಸದ್ಯ 10:30ರ ವೇಳೆಗೆ 42 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 27 ಕ್ಷೇತ್ರಗಳಲ್ಲಿ ಎಎಪಿ ಮುನ್ನಡೆಯಲ್ಲಿತ್ತು. 10:50ರ ಸುಮಾರಿಗೆ ಬಿಜೆಪಿ 40 ಕ್ಷೇತ್ರ, ಆಪ್ 30 ಕ್ಷೇತ್ರಗಳಲ್ಲಿ, 10:55ರ ವೇಳೆಗೆ ಬಿಜೆಪಿ 41 ಹಾಗೂ ಎಎಪಿ 29 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದ್ರೆ ಕಾಂಗ್ರೆಸ್ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಅಲ್ಲದೇ 16 ಕ್ಷೇತ್ರಗಳಲ್ಲಿ ಬಿಜೆಪಿ-ಆಪ್ ನಡುವೆ ನೇರಾನೇರ ಫೈಟ್ ಏರ್ಪಟ್ಟಿದ್ದು, 7 ಕ್ಷೇತ್ರಗಳಲ್ಲಿ 2,000ಕ್ಕೂ ಅಧಿಕ ಮತಗಳ ಮುನ್ನಡೆಯಲ್ಲಿದೆ. ಕಲ್ಕಾಜಿ ಕ್ಷೇತ್ರದಲ್ಲಿ ಸಿಎಂ ಅತಿಶಿ ಸತತವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ.