ಬೀದರ್ : ಮಹಾರಾಷ್ಟ ರಾಜ್ಯದಿಂದ ಅಕ್ರಮವಾಗಿ ಮದ್ಯ ಸಾಗಿಸುತಿದ್ದ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಕ್ರಾಸ್ ಬಳಿ ದಾಳಿ ನಡೆದಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ಸಾವಿರಾರು ರೂ. ಮೌಲ್ಯದ ಅಕ್ರಮ ಮದ್ಯದ ಬಾಟಲ್ಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಯು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮೋನುನಾಯಕ್ ತಾಂಡಾದ ನಿವಾಸಿ ಮಿಥುನ್ ಮೋತಿರಾಮ ಎಂದು ಗುರುತಿಸಲಾಗಿದ್ದು, ಮಹಾರಾಷ್ಟ್ರದ ಉಮ್ಮರ್ಗಾದಿಂದ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಮಾರ್ಗವಾಗಿ ಕಾರಿನಲ್ಲಿ ಅಕ್ರಮವಾಗಿ ಮದ್ಯದ ಬಾಟಲ್ಗಳನ್ನು ಸಾಗಿಸುತ್ತಿದ್ದಾಗ,ಚಂಡಕಾಪೂರ ಕ್ರಾಸ್ ಬಳಿಯ ಅಬಕಾರಿ ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ವೇಳೆ ಈತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯಿಂದ ಮದ್ಯದ ಬಾಟ್ಗಳು ಹಾಗೂ ಮದ್ಯ ಸಾಗಿಸುತ್ತಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ.