ಹಾಸನ : ಪ್ರೀತಿಸಿದ ಹುಡುಗಿ ಮದುವೆಯಾಗಿ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದರ್ಶನ್ (22) ಆತ್ಮಹತ್ಯೆ ಮಾಡಿಕೊಂಡಿದ್ದು, ದರ್ಶನ್ ತನ್ನ ಬೇವಿನಹಳ್ಳಿಯಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದುಕೊಂಡೇ ಕಾಲೇಜಿಗೆ ಹೋಗುತ್ತಿದ್ದ. ಈ ವೇಳೆ ಅದೇ ಗ್ರಾಮದ ಯುವತಿ ಜೊತೆಗೆ ಸ್ನೇಹವಾಗಿದ್ದು, ಇಬ್ಬರು ಸಹ ಐದಾರು ವರ್ಷಗಳಿಂದ ಜೊತೆಯಲ್ಲಿ ಓಡಾಡುತ್ತಿದ್ದರು ಎನ್ನಲಾಗಿದೆ. ಈಗ ದರ್ಶನ್ ಬಿಎ ಮುಗಿಸಿ ಕೃಷಿ ಮಾಡಿಕೊಂಡಿದ್ದು, ಯುವತಿಗೆ ಮದುವೆಯಾಗೋಣ ಎಂದು ಕೇಳಿದಾಗ ಆಕೆ ನಿರಾಕರಿಸಿದ್ದಾಳೆ.
ಇದರಿಂದ ಮನನೊಂದ ದರ್ಶನ್ ವಿಷ ಸೇವಿಸಿದ್ದಾನೆ. ಕೂಡಲೇ ಆತನ ಯುವತಿ ಆತನನ್ನು ಅರಸೀಕೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.