ಬೆಳಗಾವಿ : ರಾಜ್ಯ ಕಾಂಗ್ರೆಸ್ ಯುವ ಪ್ರಧಾನ ಕಾರ್ಯದರ್ಶಿ ಆಗಿರೋ ರಾಹುಲ್ ಜಾರಕಿಹೊಳಿಗೆ ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಭವ್ಯ ಸ್ವಾಗತ ಕೋರಿದ್ದಾರೆ. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿ ರಾಹುಲ್ ಜಾರಕಿಹೊಳಿ ಆಯ್ಕೆ ಆಧ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ವೇಳೆ ಪಟಾಕಿ ಸಿಡಿಸಿ ,ಪುಷ್ಟವೃಷ್ಠಿ ಮಾಡಿ ಸ್ವಾಗತ ಕೋರಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ರಾಹುಲ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದು, ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿ 1 ಲಕ್ಷ 80 ಸಾವಿರ ಮತ ಪಡೆಗಳು ಬಂದಿವೆ. ನನ್ನ ಗೆಲುವಿಗೆ ಶ್ರಮಿಸಿದವರಿಗೆ ಧನ್ಯವಾದಗಳು. ನನ್ನ ತಂದೆ ಸಚಿವ ಸತೀಶ್ ಜಾರಕಿಹೊಳಿ ಅವರು ನನಗೆ ಪ್ರೋತ್ಸಾಹ ನೀಡಿದರು. ಪಕ್ಷ ಕೊಡುವ ಜವಾಬ್ದಾರಿಯನ್ನ ನಿಭಾಯಿಸುವೆ. ಯುವ ಮತದಾರರನ್ನು ಪಕ್ಷದತ್ತ ಸೆಳೆಯಲು ಶ್ರಮಿಸುವೆ. ಸರ್ಕಾರ ಯುವಕರಿಗೆ ನೀಡಿದ ಯೋಜನೆಗಳನ್ನ ತಿಳಿಸುತ್ತೇನೆ. ಸದ್ಯಕ್ಕೆ ಪಕ್ಷ ಸಂಘಟನೆ ಮಾತ್ರ ಯಾವುದೇ ಚುನಾವಣೆ ಸ್ಪರ್ಧೆ ಬಗ್ಗೆ ಚರ್ಚೆ ಇಲ್ಲಾ ಎಂದರು.