ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಎಂಥಹ ಆಟಗಾರ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ಕಿಂಗ್ ಕೊಹ್ಲಿ ಅತ್ಯುತ್ತಮ ಫೀಲ್ಡರ್ ಕೂಡ ಹೌದು. ಇದೀಗ ಫೀಲ್ಡಿಂಗ್ ಮೂಲಕವೇ ವಿರಾಟ್ ಕೊಹ್ಲಿ ಹೊಸ ದಾಖಲೆಯತ್ತ ಹೆಜ್ಜೆಯನ್ನಿಟ್ಟಿದ್ದಾರೆ.
ಫಾರ್ಮ್ ಗೆ ಮರಳಿದ ರೋಹಿತ್: ಶತಕದ ಬಳಿಕ ಭಾವುಕರಾಗಿ ಮಾತನಾಡಿದ ಕ್ಯಾಪ್ಟನ್!
ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 2 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಕ್ಯಾಚ್ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.
ಆಸ್ಟ್ರೇಲಿಯಾ ಪರ 348 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 453 ಇನಿಂಗ್ಸ್ಗಳಲ್ಲಿ ಫೀಲ್ಡಿಂಗ್ ಮಾಡಿದ್ದಾರೆ. ಈ ವೇಳೆ ಒಟ್ಟು 327 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಇದೀಗ ಸ್ಮಿತ್ ಅವರನ್ನು ಹಿಂದಿಕ್ಕಿ ಆರನೇ ಸ್ಥಾನಕ್ಕೇರುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ.
ವಿರಾಟ್ ಕೊಹ್ಲಿ ಭಾರತದ ಪರ ಈವರೆಗೆ 544 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 653 ಇನಿಂಗ್ಸ್ಗಳಲ್ಲಿ ಫೀಲ್ಡಿಂಗ್ ಮಾಡಿರುವ ಅವರು ಒಟ್ಟು 329 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಧಿಕ ಕ್ಯಾಚ್ ಹಿಡಿದ 2ನೇ ಆಟಗಾರ ಎನಿಸಿಕೊಂಡಿದ್ದಾರೆ.