ದೇವನಹಳ್ಳಿ:- ದೇವನಹಳ್ಳಿ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪುರಸಭೆ ಸಭಾಂಗಣದಲ್ಲಿ ಜರುಗಿದೆ.
Virat Kohli: ಬ್ಯಾಟಿಂಗ್ ಅಷ್ಟೇ ಅಲ್ಲ ಕ್ಯಾಚ್ ನಲ್ಲೂ ಕಿಂಗ್ ಗೆ ಸರಿಸಾಟಿಯಿಲ್ಲ!
ಸುಮಾರು ಒಂದು ವರ್ಷದಿಂದ ಖಾಲಿ ಇದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಲೆಕ್ಷನ್ ನಡೆದಿದ್ದು, ದೇವನಹಳ್ಳಿ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಆಗಿದೆ. ಇಪ್ಪತ್ತಮೂರು ಸದಸ್ಯರನ್ನೊಳಗೊಂಡಿರುವ ದೇವನಹಳ್ಳಿ ಪುರಸಭೆ ಇದಾಗಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಜಯ ಸಾಧಿಸಿದ್ದಾರೆ.
ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮುನಿಕೃಷ್ಣ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ರವೀಂದ್ರ ಆಯ್ಕೆ ಆಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೆದ್ದ ನಂತರ ಪುರಸಭೆ ಮುಂದೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣದ ಪುರಸಭೆ ಭವನದ ಬಳಿ ಸಂಭ್ರಮ ಜೋರಾಗಿದೆ.