ಹಾಸನ: ಭದ್ರಾ ಅಭಯಾರಣ್ಯಕ್ಕೆ ಬಿಟ್ಟಿದ್ದ ಮೂರು ವರ್ಷ ಪ್ರಾಯದ ಗಂಡು ಹುಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ಹಾಸನದ (Hassan) ಬೇಲೂರು ತಾಲೂಕಿನ ರಾಮದೇವರಹಳ್ಳದ ಬಳಿ ಈ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಸೆರೆ ಹಿಡಿಯಲಾಗಿದ್ದ ಈ ಹುಲಿಯನ್ನು ರೇಡಿಯೋ ಕಾಲರ್ ಅಳವಡಿಸಿ ಚಿಕ್ಕಮಗಳೂರು ಜಿಲ್ಲೆಯ ಭದ್ರ ಅಭಯಾರಣ್ಯಕ್ಕೆ ಬಿಡಲಾಗಿತ್ತು.
ಫೆ.10 ಹಳ್ಳದ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತದೇಹ ಸ್ಥಳೀಯರಿಗೆ ಕಾಣಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.