ನವದೆಹಲಿ: ಪ್ರತಿಯೊಂದು ಮಗುವೂ ವಿಶೇಷ, ಅವರನ್ನು ಬೇರೆಯವರೊಂದಿಗೆ ಹೋಲಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಮಗುವೂ ವಿಶೇಷ, ಅವರನ್ನು ಬೇರೆಯವರೊಂದಿಗೆ ಹೋಲಿಸಬೇಡಿ ಎಂದು ಅವರು ಹೇಳಿದರು.
ಮಕ್ಕಳ ಮೇಲೆ ಒತ್ತಡ ಹೇರಬೇಡಿ. ಮಗು ಸ್ವತಃ ಉತ್ತಮವಾಗಲು ಮತ್ತು ಮೊದಲಿಗಿಂತ ಉತ್ತಮವಾಗಲು ಪ್ರಯತ್ನಿಸುತ್ತದೆ. ನಿಮ್ಮ ಮಾನಸಿಕ ಚಿಂತೆಗಳನ್ನು ಜನರೊಂದಿಗೆ ಹಂಚಿಕೊಳ್ಳಲು ಕಲಿಯಿರಿ. ಇದು ಮನಸ್ಸನ್ನು ಶಾಂತವಾಗಿರಿಸುತ್ತದೆ, ಕುಟುಂಬದ ಯಾವುದೇ ಸದಸ್ಯರೊಂದಿಗೆ ಮಾತನಾಡಿ ಎಂದು ಸಲಹೆ ನೀಡಿದರು.
ಹಾರ್ಟ್ ಅಟ್ಯಾಕ್ ತಡೆಯಲು ಈ ಬೀಜವೇ ಮದ್ದು: ನೀರಲ್ಲಿ ನೆನಸಿಟ್ಟು ತಿಂದ್ರೆ ಶುಗರ್-ಬಿಪಿ ಸಹ ಇರತ್ತೆ ಕಂಟ್ರೋಲ್!
ವಿದ್ಯಾರ್ಥಿಗಳು ಒತ್ತಡಕ್ಕೆ ಮಣಿಯಬಾರದು ಎಂದು ಸಲಹೆ ನೀಡಿದರು. ಒಬ್ಬ ಬ್ಯಾಟ್ಸ್ಮನ್ ಕ್ರೀಡಾಂಗಣದಲ್ಲಿ ಘೋಷಣೆಗಳು ಮತ್ತು ಗದ್ದಲವನ್ನು ನಿರ್ಲಕ್ಷಿಸಿ ಚೆಂಡಿನ ಮೇಲೆ ಕೇಂದ್ರೀಕರಿಸುವಂತೆಯೇ, ವಿದ್ಯಾರ್ಥಿಗಳು ಒತ್ತಡದ ಬಗ್ಗೆ ಯೋಚಿಸುವ ಬದಲು ಅಧ್ಯಯನದತ್ತ ಗಮನ ಹರಿಸಬೇಕು ಎಂದು ಅವರು ಹೇಳಿದರು.