ಮಧ್ಯಪ್ರದೇಶ: ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಹೆಚ್ಚಾಗಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸುದ್ದಿಗಳನ್ನು ಕೇಳುತ್ತಲೇ ಇರುತ್ತೇವೆ. ಹೃದಯದ ಆರೋಗ್ಯದ ಬಗ್ಗೆ ಸಾಕಷ್ಟು ಜಾಗೃತಿ ಮೂಡಿದೆಯಾದರೂ, ಹೃದಯ ಸಂಬಂಧಿ ಕಾಯಿಲೆಗಳಿಂದ ಸಂಭವಿಸುವ ಸಾವುಗಳು ನಿಂತಿಲ್ಲ.
ಇದೀಗ ಮದುವೆ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದಾಗಲೇ ಹೃದಯಸ್ತಂಭನದಿಂದ 23ರ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ರೆಸಾರ್ಟ್ನಲ್ಲಿ ನಡೆದಿದೆ.
ಹಾರ್ಟ್ ಅಟ್ಯಾಕ್ ತಡೆಯಲು ಈ ಬೀಜವೇ ಮದ್ದು: ನೀರಲ್ಲಿ ನೆನಸಿಟ್ಟು ತಿಂದ್ರೆ ಶುಗರ್-ಬಿಪಿ ಸಹ ಇರತ್ತೆ ಕಂಟ್ರೋಲ್!
ಯುವತಿಯನ್ನು ಇಂದೋರ್ ನಿವಾಸಿ ಪರಿಣಿತಾ ಜೈನ್ ಎಂದು ಗುರುತಿಸಲಾಗಿದ್ದು, ಆಕೆಯ ಸೋದರ ಸಂಬಂಧಿ ಮದುವೆಯಲ್ಲಿ ಪಾಲ್ಗೊಂಡಿದ್ದರು. 200ಕ್ಕೂ ಹೆಚ್ಚು ಗಣ್ಯರು ಉಪಸ್ಥಿತರಿದ್ದರು. ಈ ವೇಳೆ ಪರಿಣಿತಾ ವೇದಿಕೆಯಲ್ಲಿ ಬಾಲಿವುಡ್ ಗೀತೆಯೊಂದಕ್ಕೆ ನೃತ್ಯ ಮಾಡುತ್ತಿದ್ದಾಗಲೇ ಹೃದಯ ಸ್ತಂಬನದಿಂದ ಸಾವನ್ನಪ್ಪಿದ್ದಾರೆ. ಆಕೆ ಕುಸಿದು ಬಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಈ ವೇಳೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೈದ್ಯರು ಆಕೆಗೆ ಸಿಪಿಆರ್ (ಕಾರ್ಡಿಯೋಪಲ್ಮನರಿ ರೆಸಸಿಟೇಶನ್) ನೀಡಲು ಪ್ರಯತ್ನಿಸಿದ್ರು, ಆದ್ರೆ ಪ್ರಯೋಜನವಾಗಲಿಲ್ಲ. ತಕ್ಷಣ ಅಲ್ಲಿಂದ ಖಾಸಗಿ ಅಸ್ಪತ್ರೆಗೆ ಕರೆದೊಯ್ಯಲಾಯಿತು ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ರು.