ಬೆಂಗಳೂರು: ಪೊಲೀಸರ ಬಗ್ಗೆ ಭಯವೇ ಇಲ್ಲವೆಂದರೆ ಕಾನೂನು ಸತ್ತಿದೆ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಇದ್ದ ಪ್ರಕರಣಗಳನ್ನು ಸಿದ್ದರಾಮಯ್ಯ ವಾಪಸ್ ಪಡೆದಿರುವುದರಿಂದ ಮುಸ್ಲಿಂ ಮತಾಂಧರಿಗೆ ಧೈರ್ಯ ಬಂದಿದೆ.
ಜೊತೆಗೆ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು, ಇದು ಮುಸ್ಲಿಮರ ಸರ್ಕಾರ ಎಂದು ಹೇಳಿರುವುದರಿಂದ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಬಹುದು ಎಂಬ ವಿಶ್ವಾಸ ಅವರಿಗೆ ಬಂದಿದೆ. ಒಂದೆಡೆ ಆರ್ಥಿಕ ದುಸ್ಥಿತಿ ಇದ್ದರೆ, ಮತ್ತೊಂದೆಡೆ ಕಾನೂನು ಹದಗೆಟ್ಟಿದೆ.
ಹಾರ್ಟ್ ಅಟ್ಯಾಕ್ ತಡೆಯಲು ಈ ಬೀಜವೇ ಮದ್ದು: ನೀರಲ್ಲಿ ನೆನಸಿಟ್ಟು ತಿಂದ್ರೆ ಶುಗರ್-ಬಿಪಿ ಸಹ ಇರತ್ತೆ ಕಂಟ್ರೋಲ್!
ಈಗ ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಿದರೂ, ಅದು ವ್ಯರ್ಥ ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಬಗ್ಗೆ ಭಯವೇ ಇಲ್ಲವೆಂದರೆ ಕಾನೂನು ಸತ್ತಿದೆ ಎಂದರ್ಥ. ಮತಬ್ಯಾಂಕ್ಗಾಗಿ ಇಡೀ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.