ಶಿವಮೊಗ್ಗ: ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕನ ಪುತ್ರ ಬೆದರಿಕೆ ಕರೆ ಮಾಡಿದ ಘಟನೆ ಬೇರೆಯದ್ದೆ ಟ್ವಿಸ್ಟ್ ಪಡೆದುಕೊಂಡಿದೆ. ಶಾಸಕ ಬಿ.ಕೆ ಸಂಗಮೇಶ್ ಪುತ್ರ ಬಸವೇಶ್ ಬಗ್ಗೆ ಅಧಿಕಾರಿ ಜ್ಯೋತಿ ದೂರು ನೀಡುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಜ್ಯೋತಿ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾರೆಂದು ಪೊಲೀಸರಿಗೆ ನೀಡಿರುವ ದೂರು ನೀಡಿದ್ದಾರೆ.
ನಡೆದಿದ್ದೇನು..?
ಭದ್ರಾವತಿ ಗ್ರಾಮಾಂತರ ಭಾಗದ ಭದ್ರಾ ನದಿ ಒಡಲಿನಿಂದ ಅಕ್ರಮವಾಗಿ ಮರಳು ತೆಗೆಯುತ್ತಿರುವ ಸ್ಥಳಕ್ಕೆ ಗಣಿ ಅಧಿಕಾರಿ ಜ್ಯೋತಿ ಮತ್ತು ಪ್ರೀಯಾ ಅಧಿಕಾರಿಗಳು ಮೊನ್ನೆ ರಾತ್ರಿ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಮರಳು ದಂಧೆಕೋಕರು ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಪುತ್ರ ಬಸವೇಶ್ ಗೆ ಫೋನ್ ಮಾಡಿ ಜ್ಯೋತಿಯವರಿಗೆ ನೀಡಿದ್ದಾರೆ. ಆಗ ಬಸವೇಶ್ ಜ್ಯೋತಿಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಘಟನೆ ಬಗ್ಗೆ ಆಘಾತಗೊಂಡಿದ್ದ ಜ್ಯೋತಿ ಇಂದು ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ದೂರಿನಲ್ಲಿ ಅನಾಮಧೇಯ ವ್ಯಕ್ತಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.