ಅಧಿಕ ರಕ್ತದೊತ್ತಡ ಹೃದ್ರೋಗದ ಅಪಾಯವನ್ನು ತಂದೊಡ್ಡಬಹುದು. ಇದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಅಥವಾ ನಿಭಾಯಿಸಲು ವೈದ್ಯರು ಮಾತ್ರೆಗಳನ್ನು ಶಿಫಾರಸು ಮಾಡುತ್ತಾರೆ. ಮೂಲಗಳ ಪ್ರಕಾರ, ಪ್ರಪಂಚದಾದ್ಯಂತ 1 ಶತಕೋಟಿಗೂ ಅಧಿಕ ಮಂದಿ ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಹೊಂದಿದ್ದಾರೆ.
ಯತ್ನಾಳ್ ಗೆ ಶೋಕಾಸ್ ನೋಟಿಸ್ ಬಂದಿದ್ದು ನಿಜಾನಾ!? ರೆಬಲ್ ಟೀಂ ಕಟ್ಟಿ ಹಾಕಿದ್ರಾ ವಿಜಯೇಂದ್ರ?
ಸಾಮಾನ್ಯವಾಗಿ 120/80 ರಕ್ತದೊತ್ತಡವನ್ನು ನಾರ್ಮಲ್ ಎಂದು ಪರಿಗಣಿಸಲಾಗುತ್ತದೆ. ಅದಕ್ಕಿಂತ ಹೆಚ್ಚು ಅಥವಾ ಕಡಿಮೆ ಇದ್ದರೆ ರಕ್ತದೊತ್ತಡದ ಸಮಸ್ಯೆಯನ್ನು ನೀವು ಹೊಂದಿರುತ್ತೀರಿ. ವೈದ್ಯರು ನೀಡುವ ಔಷಧಿಗಳ ಜೊತೆಗೆ ನೈಸರ್ಗಿಕವಾಗಿ ಬಿಪಿ ಕಡಿಮೆ ಮಾಡುವ ಆರೋಗ್ಯಕರ ಆಹಾರವನ್ನು ಸೇವಿಸಲು ಪ್ರಯತ್ನಿಸಿ.
ಬಿಪಿಯಿಂದ ಬಳಲುತ್ತಿರುವವರು ವೈದ್ಯರು ಸೂಚಿಸಿರುವ ಕೆಲವು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೂ, ಇವುಗಳ ಜೊತೆಗೆ ಆಹಾರ ಪದ್ಧತಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳುವುದು ಬಹಳ ಅವಶ್ಯಕ. ಅಧಿಕ ರಕ್ತದೊತ್ತಡವು ಒಟ್ಟಾರೆ ಆರೋಗ್ಯದ ಮೇಲೆ, ವಿಶೇಷವಾಗಿ ಮೂತ್ರಪಿಂಡಗಳ ಮೇಲೆ ಪರಿಣಾಮ ಬೀರುತ್ತದೆ
ಇದಲ್ಲದೇ, ಇದು ತಲೆನೋವು, ತಲೆ ತಿರುಗುವಿಕೆ ಮತ್ತು ದೃಷ್ಟಿಹೀನತೆಯಂತಹ ಸಮಸ್ಯೆಗಳನ್ನು ಸಹ ಉಂಟು ಮಾಡಬಹುದು. ಕೆಲವೊಮ್ಮೆ ಮೂಗಿನಲ್ಲಿ ರಕ್ತಸ್ರಾವವಾಗುವುದು ಸಹ ಅಧಿಕ ರಕ್ತದೊತ್ತಡದಿಂದ ಉಂಟಾಗಬಹುದು. ಆದ್ದರಿಂದ, ರಕ್ತದೊತ್ತಡವನ್ನು ಯಾವಾಗಲೂ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಹಾಗಾದ್ರೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಆಹಾರಗಳು ಯಾವುವು ಎಂಬುವುದರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ.
ಎಳನೀರು: ಬೇಸಿಗೆಯಲ್ಲಿ ಎಳನೀರು ಕುಡಿಯುವುದು ತುಂಬಾ ಪ್ರಯೋಜನಕಾರಿ ಆಗಿದೆ. ಎಳನೀರಿನಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ ಇದ್ದು, ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಪ್ರತಿದಿನ ಎಳನೀರು ಕುಡಿಯುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ
ಹಸಿರು ತರಕಾರಿಗಳು: ಹಣ್ಣುಗಳು, ತರಕಾರಿಗಳು, ಸೊಪ್ಪು, ಧಾನ್ಯಗಳು ಮತ್ತು ದ್ವಿದಳ ಧಾನ್ಯಗಳು ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿವೆ. ರಕ್ತದೊತ್ತಡದ ಸಮಸ್ಯೆಗಳನ್ನು ಕಡಿಮೆ ಮಾಡುವಲ್ಲಿ ಇವು ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದಲ್ಲದೇ ಇದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಗುಣಲಕ್ಷಣಗಳ ಜೊತೆಗೆ, ಇದು ದೇಹದ ಇತರ ಅಂಗಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಅಗತ್ಯವಾದ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ಗಳಿಂದ ಕೂಡಿದೆ.
ಸೌತೆಕಾಯಿ: ಸೌತೆಕಾಯಿಯು 90% ಕ್ಕಿಂತ ಹೆಚ್ಚು ನೀರಿನ ಅಂಶದಿಂದ ಕೂಡಿದೆ. ಆದ್ದರಿಂದ ಇದು ಬೇಸಿಗೆಯಲ್ಲಿ ಅತ್ಯುತ್ತಮವಾದ ಹೈಡ್ರೇಟಿಂಗ್ ಫುಡ್ಗಳಲ್ಲಿ ಒಂದಾಗಿದೆ. ಇವು ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುವುದರಿಂದ, ಹೊಟ್ಟೆ ಉಬ್ಬರ ಮತ್ತು ನಿರ್ಜಲೀಕರಣವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಇವೆರಡೂ ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತವೆ. ಇದಲ್ಲದೇ, ಸೌತೆಕಾಯಿಗಳು ಪೊಟ್ಯಾಸಿಯಮ್ ಅನ್ನು ಹೊಂದಿದ್ದು, ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಬಾಳೆಹಣ್ಣುಗಳು: ಬಾಳೆಹಣ್ಣುಗಳು ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ದೇಹದ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಬಹಳ ಸಹಾಯಕವಾಗಿವೆ. ಪೊಟ್ಯಾಸಿಯಮ್ ಶಕ್ತಿಯ ಕೇಂದ್ರವಾಗಿ ಕಾರ್ಯನಿರ್ವಹಿಸುವ ಬಾಳೆಹಣ್ಣುಗಳು ದೇಹದಲ್ಲಿನ ಸೋಡಿಯಂ ಮಟ್ಟವನ್ನು ನಿಯಂತ್ರಿಸುತ್ತವೆ ಮತ್ತು ಆರೋಗ್ಯಕರ ರಕ್ತದೊತ್ತಡಕ್ಕೆ ಕಾರಣವಾಗುತ್ತವೆ.
ಮೊಸರು: ಬೇಸಿಗೆಯಲ್ಲಿ ಮೊಸರು ತಿನ್ನುವುದರಿಂದ ದೇಹವನ್ನು ತಂಪಾಗಿಡಬಹುದು. ಮೊಸರಿನಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದಲ್ಲದೇ, ಇದು ಪ್ರೋಟೀನ್, ಕ್ಯಾಲ್ಸಿಯಂ, ರಿಬೋಫ್ಲಾವಿನ್, ವಿಟಮಿನ್ ಬಿ 6 ಮತ್ತು ವಿಟಮಿನ್ ಬಿ 12 ಅನ್ನು ಹೊಂದಿದ್ದು, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ
ಕಿತ್ತಳೆ: ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಸಿಟ್ರಸ್ ಹಣ್ಣುಗಳನ್ನು ತಿನ್ನಬೇಕು. ದ್ರಾಕ್ಷಿ, ಕಿತ್ತಳೆ ಮತ್ತು ನಿಂಬೆಹಣ್ಣಿನಂತಹ ಸಿಟ್ರಸ್ ಹಣ್ಣುಗಳು ರಕ್ತದೊತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿವೆ.