ಮೈಸೂರು:- ಕಲ್ಲು ಹೊಡೆಯುವುದು ಮುಸ್ಲಿಂ ಧರ್ಮದಲ್ಲೇ ಇದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
Good News: ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಹಾಗಿದ್ರೆ ಇಲ್ಲಿದೆ ಅವಕಾಶ!
ಪೊಲೀಸ್ ಠಾಣೆ ಮೇಲೆ ನಡೆದ ಅಕ್ರಮ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಗರದಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಪುಂಡ ಮುಸ್ಲಿಮರು ಪೊಲೀಸ್ ಠಾಣೆ ಮೇಲೆ ಅಕ್ರಮಣ ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಪೊಲೀಸರನ್ನೇ ಗುರಿಯಾಗಿಸಿ ಇಲ್ಲಿ ಯಾವಾಗಲೂ ದಾಳಿ ಆಗುತ್ತದೆ. ಈಗಲೂ ಅದೇ ಮುಂದುವರಿದಿದೆ. ಟಿಪ್ಪು ಸಂತತಿಯವರು ಮಾಡಿರುವ ಗಲಾಟೆ ಇದು. ಸಿದ್ದರಾಮಯ್ಯ ಆಡಳಿತ ಹೇಗಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರದ್ದು ಕನ್ನಡಿಗರ ಸರ್ಕಾರ ಅಲ್ಲ. ಇದು ತಾಲಿಬಾನಿ ಸರ್ಕಾರ. ಪೊಲೀಸರು ಆಳುವ ಸರ್ಕಾರದ ಅಣತಿಯಂತೆ ನಡೆಯುವುದನ್ನು ಮೊದಲು ಬಿಡ ಬೇಕು. ಪುಂಡ ಮುಸ್ಲಿಮರಿಗೆ ಸಿದ್ದರಾಮಯ್ಯ ಫ್ರೀ ಬಿಟ್ಟಿದ್ದಾರೆ. ಅದಕ್ಕೆ ಈ ರೀತಿ ಗಲಾಟೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಸೋತರೆ ಉದಯಗಿರಿ ಮುಸ್ಲಿಂರಿಗೆ ಯಾಕೆ ರೋಷ ಬರುತ್ತೆ? ಅವರ ಮನೆಯಲ್ಲಿ ಯಾಕೆ ಸೂತಕ ಬರುತ್ತೆ? ಮುಸ್ಲಿಮರಿಗೆ ಬುದ್ದಿ ಕಲಿಸಬೇಕು. ಉದಯಗಿರಿ ವ್ಯಾಪ್ತಿಯಲ್ಲಿ ಪೊಲೀಸರು ಕೂಬಿಂಗ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.