ಮೈಸೂರು: ಮೆಟ್ರೋ ಪ್ರಯಾಣ ದರ ಇಳಿಕೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರದಲ್ಲಿ ಮಾತ್ರವಲ್ಲ,
ಬಿಜೆಪಿ ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿದೆ. ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ಕೇಂದ್ರ ವ್ಯಾಪ್ತಿಗೆ ಬರುತ್ತೆ. ದರ ಏರಿಕೆಗೆ ನೇಮಿಸಿರುವ ಮುಖ್ಯಸ್ಥರು ಅದನ್ನು ನಿರ್ಧಾರ ಮಾಡ್ತಾರೆ. ಮೆಟ್ರೋ ಪ್ರಯಾಣ ದರ ಇಳಿಕೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ ಎಂದರು.
10th, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅಪ್ಲೈ ಮಾಡಿ
ಇನ್ನೂ ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಸಚಿವ ಕೆಎಸ್ ರಾಜಣ್ಣ ಹೇಳಿಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜಣ್ಣ ಅವರ ಮಾತಿಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. 8-10 ದಿನದಲ್ಲಿ ಮುಖ್ಯಮಂತ್ರಿಗಳೇ ಪ್ರತಿಕ್ರಿಯೆ ಕೊಡುತ್ತಾರೆ. ಮೈಸೂರಿನ ನೆಲದಲ್ಲಿ ನಿಂತು ಹೇಳ್ತಿದ್ದೇನೆ, ಪೊಲೀಸರದ್ದು ತಪ್ಪಿಲ್ಲ. ಎಲ್ಲಾ ಮಾಹಿತಿ ಪಡೆದಿದ್ದೇನೆ, ಪೊಲೀಸರು ಅನಾಹುತ ತಪ್ಪಿಸಿದ್ದಾರೆ ಎಂದರು.