ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಅಹಮದಾಬಾದ್ನಲ್ಲಿ ನಡೆಯುತ್ತಿದೆ. ಇದಕ್ಕೂ ಮುನ್ನ ನಡೆದಿದ್ದ 2 ಪಂದ್ಯಗಳಲ್ಲಿ ರೋಹಿತ್ ಸೈನ್ಯ ಜಯಭೇರಿ ಭಾರಿಸಿ ಒಂದು ಪಂದ್ಯಕ್ಕೂ ಮುಂಚಿತವಾಗಿಯೇ ಸರಣಿ ಕೈವಶ ಮಾಡಿಕೊಂಡಿದೆ.
ಇದೀಗ ಮೂರನೇ ಪಂದ್ಯದಲ್ಲೂ ಭಾರತ ಗೆದ್ದು ಇಂಗ್ಲೆಂಡ್ ಅನ್ನು ವೈಟ್ವಾಶ್ ಮಾಡಲು ಯೋಜನೆ ರೂಪಿಸಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
10th, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅಪ್ಲೈ ಮಾಡಿ
ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಹೊರಬಿದ್ದಿದ್ದು, ಇಂಗ್ಲೆಂಡ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದ್ದು, ಭಾರತ 3 ಬದಲಾವಣೆಗಳನ್ನು ಮಾಡಿದೆ.
ಭಾರತ ತಂಡದಲ್ಲಿ 3 ಬದಲಾವಣೆ
ಭಾರತ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ ರವೀಂದ್ರ ಜಡೇಜ ಬದಲಿಗೆ ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಬದಲಿಗೆ ವಾಷಿಂಗ್ಟನ್ ಸುಂದರ್ ಮತ್ತು ಶಮಿ ಬದಲಿಗೆ ಅರ್ಶ್ದೀಪ್ ಸಿಂಗ್ ಅವರಿಗೆ ಅವಕಾಶ ಸಿಕ್ಕಿದೆ.
ಭಾರತ ತಂಡ
ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್