ಗದಗ ಜಿಲ್ಲೆಯ ಮುಂಡರಗಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ 155 ನೇ ಜಾತ್ರಾ ಮಹೋತ್ಸವ ಹಿನ್ನೆಲೆ, ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಅನ್ನದಾನೀಶ್ವರ ಮಹಾರಥೋತ್ಸವ ಸಕಲ ವಾದ್ಯ ವೈಭವಗಳೊಂದಿಗೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಮನಿಪ್ರ ನಾಡೋಜ.ಡಾ.ಅನ್ನದಾನೀಶ್ವರ ಮಹಾಸ್ವಾಮಿಜಿ ಸಾನಿಧ್ಯ ವಹಿಸಿದ್ದರು. ಹಾಗೂ ಶ್ರೀಮಠದ ಉತ್ತರಾಧಿಕಾರಿಗಳಾದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಲಿಂಗನಾಕನಹಳ್ಳಿ,
10th, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅಪ್ಲೈ ಮಾಡಿ
ಕನಕಗಿರಿ, ಹೂವಿನಶಿಗ್ಲಿ, ಹೊಳಲು, ಕುಕನೂರ, ಸೇರಿದಂತೆ ನಾಡಿನ ಹಲವಾರು ಮಠಾಧೀಶರು ಪಾಲ್ಗೊಂಡಿದ್ದರು. ಶಾಸಕ ಡಾ.ಚಂದ್ರು ಲಮಾಣಿ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಭಾಗವಹಿಸಿದ್ದರು. ಸಹಸ್ರಾರು ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಇಷ್ಟಾರ್ಥಗಳನ್ನ ಬೇಡಿಕೊಂಡರು.