ಬೆಂಗಳೂರು:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯ ಮಹಿಳೆಯವರಿಗೆ ಸಾಕಷ್ಟು ಉಪಯೋಗವಾಗಿದೆ.
ತಂಬಾಕು ತಿನ್ನೋದು ಬಿಡು ಅಂತ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ನೇಣಿಗೆ ಶರಣು..!
ಆದರೆ, ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆ ಹಣ ಜಮಾ ಆಗದ ಹಿನ್ನೆಲೆ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಪೆಂಡಿಂಗ್ ಇರುವ ಮೂರು ತಿಂಗಳ ಹಣ ಯಾವಾಗ ಮಹಿಳೆಯರ ಖಾತೆ ಹಣ ಜಮಾ ಆಗಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
15ನೇ ತಿಂಗಳಿನ ಹಣ ಇನ್ನೂ ಕೆಲ ಜಿಲ್ಲೆಗಳಲ್ಲಿ ಬಂದಿಲ್ಲ. ಹಾಗೂ 16 ಹಾಗೂ 17 ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗಲಿದೆ ಎಂದು ಮಹಿಳೆಯರು ಕಾದುಕುಳಿತಿದೆ. ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಜಮೆ ಆಗುತ್ತದೆ ಎಂದು ತಿಳಿದು ಬಂದಿದೆ. ಈ ತಿಂಗಳ ಕೊನೆಯಲ್ಲಿ ಗೃಹ ಲಕ್ಷ್ಮಿ ಯೋಜನೆಯ 15 ಹಾಗೂ 16 ನೇ ಕಂತಿನ ಹಣ ಜಮಾ ಆಗಲಿದೆ ಎಂದು ಮೂಲಗಳು ತಿಳಿಸಿವೆ
ಇನ್ನು ಪೆಂಡಿಂಗ್ ಇರುವ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ, ಈಗಾಗಲೇ ಬಿಡುಗಡೆ ಕಾರ್ಯ ಶುರುವಾಗಿದ್ದು ಈ ವಾರದ ಕೊನೆಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆ ತಲುಪಲಿದೆ ಎಂದು ಮೂಲಗಳು ತಿಳಿಸಿವೆ. ಎಲ್ಲಾ ಹಣವನ್ನು ಹಾಗೂ ಎಲ್ಲಾ ಜಿಲ್ಲೆಗಳಿಗೆ ಒಟ್ಟಾರೆ ಬಿಡುಗಡೆ ಮಾಡಲು ಸಾಧ್ಯವಿಲ್ಲದ ಕಾರಣ, ಹಂತ ಹಂತವಾಗಿ ಹಣ ಬಿಡುಗಡೆ ಆಗಲಿದೆ. ಜೊತೆಗೆ ಹಣ ವರ್ಗಾವಣೆಗೆ ಇನ್ನಷ್ಟು ಸುಲಭ ಪ್ರಕ್ರಿಯೆ ಕೈಗೊಳ್ಳುವ ಸಲುವಾಗಿ ತಡವಾಗಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಕೆಲ ಜಿಲ್ಲೆಗಳಲ್ಲಿ 15 ನೇ ಕಂತಿನ ಹಣ ಬಿಡುಗಡೆಯಾಗಿಲ್ಲ. ಯಾವಾಗ 15 ನೇ ಕಂತಿನ ಹಣ ಬಿಡುಗಡೆಯಾಗಲಿದೆ ಎಂದು ಮಹಿಳೆಯರು ಕಾದು ಕುಳಿತಿದ್ದಾರೆ. ಈ ತಿಂಗಳ 15ರಂದು ಹಣ ಬ್ಯಾಂಕ್ ಖಾತೆ ತಲುಪುವ ನಿರೀಕ್ಷೆ ಇದೆ