ಮೈಸೂರು:- ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ!? ಮಾರ್ಮಿಕವಾಗಿ ಟ್ವೀಟ್ ಮಾಡಿದ ಡಿಕೆಶಿ!
ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಹೇಲ್ @ ಸೈಯದ್ ಸುಹೇಲ್, ಅಯಾನ್ ಬಿನ್ ಜಬೀವುಲ್ಲಾ, ಕಲೀಲ್ ಪಾಷಾ, ಗೌಸಿಯಾ ನಗರ ಸೈಯದ್ ಸಾದಿಕ್ ಬಿನ್ ನವೀದ್, ಏಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ ಸಾದಿಕ್ ಪಾಷ್ @ ಸಾದಿಕ್ ಬಿನ್ ಖಾಲಿದ್ ಪಾಷಾ, ಅರ್ಬಾಜ್ ಷರೀಫ್ s/o ಇಕ್ಬಾಲ್ ಶರೀಫ್, ಶೋಯಬ್ ಪಾಷಾ s/o ಮಜೀದ್ ಪಾಷಾ ಅವರನ್ನ ಬಂಧಿಸಿದ್ದು, ಮತ್ತಷ್ಟು ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದೇ ಫೆ.10ರಂದು ತಡರಾತ್ರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರು ತಲ್ಲು ತೂರಾಟ ನಡೆಸಿದ್ದರು. ಈ ವೇಳೆ ಇನ್ಸ್ಪೆಕ್ಟರ್ ಸೇರಿದಂತೆ 14 ಪೊಲೀಸರು ಗಾಯಗೊಂಡಿದ್ದರು. 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂ ಆಗಿದ್ದವು.