ಬೆಂಗಳೂರು:- ಇಂದಿನಿಂದ 2 ದಿನ ಬೆಂಗಳೂರಿನ ಯಲಹಂಕ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಧುಮೇಹಿಗಳ ಗಮನಕ್ಕೆ: ಸಕ್ಕರೆ ಮಾತ್ರವಲ್ಲ, ನಿಮಗೆ ಈ ಆಹಾರಗಳೂ ವಿಷಕ್ಕೆ ಸಮಾನ..!
ಇಂದು ಮತ್ತು ನಾಳೆ ಏಷ್ಯಾದ ಅತಿದೊಡ್ಡ ಏರ್ ಶೋ ನಡೆಯಲಿದೆ. ಈ ಏರ್ ಶೋ ವೀಕ್ಷಿಸಲು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಆಗಮಿಸುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಯಲಹಂಕ ಸುತ್ತಮುತ್ತಲಿನ ಶಾಲಾ ಕಾಲೇಜುಗಳಿಗೆ ಫೆ. 13 – 14 ರಂದು ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇದು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪದವಿ ಕಾಲೇಜುಗಳಿಗೆ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ. ಆದರೆ ಯಾವ ಶಾಲೆ, ಕಾಲೇಜುಗಳು ಎಂದು ನಿರ್ದಿಷ್ಟವಾಗಿ ಪಟ್ಟಿ ಮಾಡಿಲ್ಲ.
ಯಲಹಂಕದ ವಾಯುನೆಲೆಯಲ್ಲಿ ಫೆ. 10 ರಿಂದ 14 ರವರೆಗೆ ಏರೋ ಇಂಡಿಯಾ-2025 ನಡೆಯಲಿರುವ ಹಿನ್ನೆಲೆಯಲ್ಲಿ ಮುಂದಿನ 11 ದಿನಗಳವರೆಗೆ ಯಲಹಂಕ ಬಳಿ ನಮ್ಮ ಮೆಟ್ರೊ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ.
ಭಾರತೀಯ ವಾಯುಪಡೆ ಮನವಿ ಮೇಧಿರೆಗೆ ಐಎಎಫ್ ಕ್ಯಾಂಪಸ್ ವ್ಯಾಪ್ತಿಗೆ ಬರುವ ಯಲಹಂಕ ವಿಮಾನ ನಿಲ್ದಾಣ ಮಾರ್ಗದ ಮೆಟ್ರೊ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಆರ್ಸಿಎಲ್ ಹೇಳಿದೆ.
ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಫೆ. 11 ರಿಂದ 14 ರವರೆಗೆ ಆಯೋಜನೆಯಾಗಿರುವ ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನಕ್ಕೆ ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಚಾಲನೆ ನೀಡಿದರು. ಬಳಿಕ ಭಾರತೀಯ ವಾಯುಪಡೆಯ ಪ್ರಖ್ಯಾತ ಸೂರ್ಯ ಕಿರಣ್ ತಂಡ ಬಾನಂಗಳದಲ್ಲಿ ತ್ರಿವರ್ಣ ಧ್ವಜ ಪ್ರದರ್ಶಿಸುವ ಮೂಲಕ ಏರ್ ಶೋ ಪ್ರಾರಂಭಿಸಿತು.