ನವದೆಹಲಿ: ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಯತ್ನಾಳ್ ಬಣದ ಹೋರಾಟದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ನಾನು ನನಗೆ ಲಕ್ಷ್ಮಣ ರೇಖೆ ಹಾಕಿಕೊಂಡಿದ್ದೇನೆ. ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡಲ್ಲ ಎಂದರು.
Immunity Power: ಈ ಆಹಾರಗಳನ್ನು ತಿಂದ್ರೆ ಸಾಕು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತೆ..!
ಉದಯಗಿರಿ ಕೋಮುಗಲಭೆ ವಿಚಾರವಾಗಿ ಮಾತನಾಡಿದ ಅವರು, ಗಲಭೆಕೋರರು ಆರ್ಎಸ್ಎಸ್ನವರು ಎಂದು ಆರೋಪ ಮಾಡಿದ್ದಾರೆ. ಈಗ ಪ್ರಕರಣದಲ್ಲಿ ಯಾರು ಬಂಧಿತರು? ಅವರಿಗೆ ಬದ್ಧತೆ ಇದ್ರೆ, ನೈತಿಕತೆ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಕ್ಷಮೆಯಾಚನೆ ಮಾಡದೆ ಇದ್ದರೆ ಲಕ್ಷ್ಮಣ್ ಅವರನ್ನು ಕಾಂಗ್ರೆಸ್ ವಜಾ ಮಾಡಬೇಕು ಎಂದು ಆಗ್ರಹಿಸಿದರು.