ಹಾಸನ : ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಬೆಳ್ಳಾವರ ಗ್ರಾಮದಲ್ಲಿ ನಡೆದಿದೆ. ಕನಗುಪ್ಪೆ ಗ್ರಾಮದ ದ್ಯಾವಮ್ಮ ಮೃತ ಮಹಿಳೆ.. ದ್ಯಾವಮ್ಮ ಜಾನುವಾರುಗಳನ್ನು ಹೋಗಿದ್ದಾಗ ಕಾಡಾನೆ ದಾಳಿ ಮಾಡಿದೆ.
ಜಾನುವಾರಗಳನ್ನು ಹುಡುಕಲು ಹೋಗಿದ್ದ ದ್ಯಾವಮ್ಮ ಮನೆಗೆ ಬರದಿದ್ದಾಗ, ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಆಗ ಮುಳ್ಳಿನ ಪೊದೆಯಲ್ಲಿ ಶವ ಪತ್ತೆಯಾಗಿದೆ. ಮಹಿಳೆ ದೇಹದ ಮೇಲಿನ ಗಾಯದ ಗುರುತು ಮತ್ತು ಸ್ಥಳದಲ್ಲಿ ಆನೆಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಕಾಡಾ. ಕಾಡಾನೆ ದಾಳಿಯಿಂದಲೇ ದ್ಯಾವಮ್ಮ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಥಳಕ್ಕೆ ಅರೇಹಳ್ಳಿ ಠಾಣೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.