ಕನ್ನಡ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ಟಾಲಿವುಡ್, ಬಾಲಿವುಡ್ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ನಟಿ ತಮ್ಮ ಹೇಳಿಕೆಗಳ ಮೂಲಕವೂ ಆಗಾಗ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಇದೀಗ ಮತ್ತೆ ರಶ್ಮಿಕಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.
ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಅವರನ್ನು ದ್ವೇಷಿಸುವವರ ಸಂಖ್ಯೆ ದೊಡ್ಡದಿದೆ. ತಮ್ಮ ಹೇಳಿಕೆಗಳ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿರುವ ರಶ್ಮಿಕಾ ಇದೀನ ‘ನಾನು ಹೈದರಾಬಾದ್ನವಳು’ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಮೂಲಕ ಮತ್ತೆ ಟ್ರೋಲ್ ಆಗಿದ್ದಾರೆ.
ರಶ್ಮಿಕಾ ಮಂದಣ್ಣ ಹಾಗೂ ವಿಕ್ಕಿ ಕೌಶಲ್ ನಟನೆಯ ‘ಛಾವಾ’ ಇಂದು (ಫೆಬ್ರವರಿ 14) ರಿಲೀಸ್ ಆಗಿದೆ. ಈ ಚಿತ್ರದ ಈವೆಂಟ್ ಒಂದು ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ರಶ್ಮಿಕಾ ನಾನು ಹೈದರಾಬಾದ್ ನವಳು ಎಂದಿದ್ದಾರೆ. ರಶ್ಮಿಕಾಗೆ ಕರ್ನಾಟಕ ಸಂಪೂರ್ಣವಾಗಿ ಮರೆತು ಹೋಗಿದೆ ಎಂದು ಅನೇಕರು ಹೇಳಿದ್ದಾರೆ.
‘ನಾನು ಹೈದರಾಬಾದ್ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ ಎಂದುಕೊಳ್ಳುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಕನ್ನಡಿಗರು ರಶ್ಮಿಕಾ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.