ಗದಗ: ಗದಗದಲ್ಲಿ ಗಿರೀಶ್ ಮಟ್ಟಣ್ಣವರ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ಸೌಜನ್ಯ ಹೋರಾಟ ಸಮಿತಿ ಮತ್ತು ಪ್ರಜಾಪ್ರಭುತ್ವ ವೇದಿಕೆ ಅಧ್ಯಕ್ಷ ಗಿರೀಶ ಮಟ್ಟಣ್ಣವರ್ ಸುಗ್ರೀವಾಜ್ಞೆ ಕುರಿತು ಜಾಗೃತಿ ಮೂಡಿಸಲು ಆಗಮಿಸಿದ್ದರು.
ಸರ್ವೇ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣವಾಯ್ತಾ..?
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಹಾವಳಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ವಿರುದ್ಧ ಗಿರೀಶ ಮಟ್ಟಣ್ಣವರ ಪತ್ರಿಕಾಗೋಷ್ಠಿ ನಡೆಸಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಲ್ಲಿ ಹೆಚ್ಚಿನ ಬಡ್ಡಿ ವಸೂಲಿ ಅಂತ ಗಿರೀಶ್ ಆರೋಪಿಸಿದರು. ಈ ವೇಳೆ ಪತ್ರಿಕಾಭವನಕ್ಕೆ ನೂರಾರು ಮಹಿಳೆಯರು ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಮಹಿಳಾ ಗುಂಪಿನ ಸದಸ್ಯರು ಪ್ರತಿಭಟನೆ ನಡೆಸಿದರು. ಗಿರೀಶ ಮಟ್ಟಣ್ಣವರ ಹೊರಗೆ ಕಳುಹಿಸಿ, ಆತನ ಪ್ರಶ್ನೆಗೆ ನಾವು ಉತ್ತರಿಸುತ್ತೇವೆ ಎಂದು ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪ್ರತಿಭಟನಾ ನಿರತ ಮಹಿಳೆಯರ ಮನವೊಲಿಸುವಲ್ಲಿ ಯಶಸ್ವಿಯಾದರು.