ಬೆಂಗಳೂರು: ಕೆಪಿಎಸ್ ಸಿಯ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಅನ್ಯಾಯವಾಗಿದೆ ಎಂದು ಕೆಎಎಸ್ ಪರೀಕ್ಷೆ ಸಂಬಂಧ ಮತ್ತೆ ಕರವೇ ಪ್ರತಿಭಟನೆಗಿಳಿದಿದೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ. ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ನಿಮಗೆ ಗೊತ್ತೆ..? ಪುರುಷರಿಗಿಂತ ಮಹಿಳೆಯರು ಗಸಗಸೆ ತಿಂದ್ರೆ ಹೆಚ್ಚು ಲಾಭ: ಕೇಳಿದ್ರೆ ಶಾಕ್ ಆಗ್ತೀರಿ!
ಹಿಂದೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಾನುವಾದದ ಸಮಸ್ಯೆ ಕಂಡುಬಂದಿದ್ದರಿಂದ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡಿತ್ತು. ನಮ್ಮ ಚಳವಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮರುಪರೀಕ್ಷೆಗೆ ಆದೇಶಿಸಿದ್ದರು. ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವೆಲ್ಲ ಒಕ್ಕೊರಲಿನಿಂದ ಅಭಿನಂದಿಸಿದ್ದೆವು. ಆದರೆ ಮರುಪರೀಕ್ಷೆಯಲ್ಲೂ ಕನ್ನಡಾನುವಾದದ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದ್ದಾರೆ.