ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) ನ ಮೂರನೇ ಸೀಸನ್ ಆರಂಭವಾಗಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈಗಾಗಲೇ ಹಿನ್ನಡೆಯನ್ನು ಎದುರಿಸುತ್ತಿದೆ, ಏಕೆಂದರೆ ಕ್ರಿಕೆಟ್ ನೆಕ್ಸ್ಟ್ ನ ಮೂಲಗಳು ಆಫ್-ಸ್ಪಿನ್ನರ್ ಶ್ರೇಯಾಂಕ ಪಾಟೀಲ್ ಇತ್ತೀಚಿನ ಗಾಯದಿಂದಾಗಿ ಇಡೀ ಸೀಸನ್ ಗೆ ಹೊರಗುಳಿಯುವ ಸಾಧ್ಯತೆಯಿದೆ ಎಂದು ಹೇಳಿವೆ.
ಕನ್ನಡತಿ ಶ್ರೇಯಾಂಕಾ ಪಾಟೀಲ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕಾಗಿ ವೆಸ್ಟ್ ಇಂಡೀಸ್ ಹಾಗೂ ಐರ್ಲೆಂಡ್ ವಿರುದ್ಧದ ಟೂರ್ನಿಗೂ ಅಲಭ್ಯರಾಗಿದ್ದರು. ಮಹಿಳಾ ಪ್ರೀಮಿಯರ್ ಲೀಗ್ ಶುರುವಾಗುವ ಹೊತ್ತಿಗೆ ಶ್ರೇಯಾಂಕ ಫಿಟ್ ಆಗಲಿದ್ದಾರೆ ಎಂದು ಹೇಳಲಾಗ್ತಿತ್ತು.
ನಿಮಗೆ ಗೊತ್ತೆ..? ಪುರುಷರಿಗಿಂತ ಮಹಿಳೆಯರು ಗಸಗಸೆ ತಿಂದ್ರೆ ಹೆಚ್ಚು ಲಾಭ: ಕೇಳಿದ್ರೆ ಶಾಕ್ ಆಗ್ತೀರಿ!
ಆದ್ರೆ ಗುಜರಾತ್ ಜೈಂಟ್ಸ್ ವಿರುದ್ಧ ನಡೆದ ಉದ್ಘಾಟನಾ ಪಂದ್ಯಕ್ಕೆ ಅಲಭ್ಯರಾಗುವ ಮೂಲಕ ಅವರು ಸಂಪೂರ್ಣ ಫಿಟ್ ಆಗಿಲ್ಲ ಎಂಬುದು ಗೊತ್ತಾಗಿದೆ. ಹೀಗಾಗಿ ಶ್ರೇಯಾಂಕಾ ಪಾಟೀಲ್ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ ಎನ್ನಲಾಗುತ್ತಿದೆ. ಶ್ರೇಯಾಂಕ ಬದಲಿಗೆ ಸ್ನೇಹ್ ರಾಣಾ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.