ಬೆಂಗಳೂರು: ಸಿದ್ದರಾಮಯ್ಯ, ಡಿಕೆಶಿ ಸೇರಿ ಎಲ್ಲರ ಜೊತೆ ನಾನು ನೀರಾವರಿ ವಿಚಾರವಾಗಿ ಮಾತಾಡೋಕೆ ಸಿದ್ಧ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗೋದಾವರಿ-ಕೃಷ್ಣ-ಕಾವೇರಿ ಯೋಜನೆ ವಿಚಾರವಾಗಿ ನೀರು ಹೆಚ್ಚಳ ಮಾಡುವಂತೆ ನಾನು ಪ್ರಧಾನಿಗಳು,
ನೀರಾವರಿ ಸಚಿವರಿಗೆ 2022 ಮತ್ತು 2024 ರಲ್ಲಿ ಪತ್ರ ಬರೆದಿದ್ದೆ. ಸದ್ಯ ನಮಗೆ 15.891 TMC ನೀರು ಹಂಚಿಕೆ ಮಾಡಲಾಗಿದೆ. ಆದರೆ, ಈ ಪ್ರಮಾಣವನ್ನು 25 TMC ಗೆ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದ್ದಾರೆ.
ನಿಮಗೆ ಗೊತ್ತೆ..? ಪುರುಷರಿಗಿಂತ ಮಹಿಳೆಯರು ಗಸಗಸೆ ತಿಂದ್ರೆ ಹೆಚ್ಚು ಲಾಭ: ಕೇಳಿದ್ರೆ ಶಾಕ್ ಆಗ್ತೀರಿ!
ಸಂಸತ್ನಲ್ಲಿ ಈ ಬಗ್ಗೆ ನಾನು ಮಾತಾಡಿದ್ದೇನೆ. ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ ಅವರು ಪ್ರಧಾನಿ ಮೋದಿ ಅವರ ಬಳಿ ಮಾತಾಡ್ತಾರೆ. ಮೋದಿ ಅವರು ನಮಗೆ ಹತ್ತಿರ ಇರೋದ್ರಿಂದ ಈ ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ಮಾಡ್ತೀನಿ.
ನೀರಾವರಿ ವಿಚಾರವಾಗಿ ನಮ್ಮಲ್ಲಿ ಯಾವುದೇ ರಾಜಕೀಯ ಇಲ್ಲ. ಸಿದ್ದರಾಮಯ್ಯ, ಡಿಕೆಶಿವಕುಮಾರ್, ಕಾಂಗ್ರೆಸ್ ಸಂಸದರು ಎಲ್ಲರ ಜೊತೆ ನಾನು ನೀರಾವರಿ ವಿಚಾರವಾಗಿ ಮಾತಾಡೋಕೆ ಸಿದ್ಧ. ನಮಗೆ ಸಮಸ್ಯೆ ಪರಿಹಾರ ಆಗಬೇಕು. ಇದಕ್ಕೆ ನನ್ನ ಹೋರಾಟ ಮುಂದುವರೆಸುತ್ತೇನೆ ಅಂತ ತಿಳಿಸಿದ್ದಾರೆ.