ಬೆಂಗಳೂರು: ನೀರಾವರಿ ಯೋಜನೆಗಳಿಗಾಗಿ ನಾನು ಸದಾ ಹೋರಾಟ ಮಾಡೋಕೆ ಸಿದ್ದ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆ ವಿಚಾರ ಸುಪ್ರೀಂನಲ್ಲಿದ್ದು ಯೋಜನೆಗೆ ಗೋವಾ ವಿರೋಧ ಮಾಡಿದೆ. ಗೋವಾ ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಹಾಕಿದೆ. ನಮ್ಮ ಸರ್ಕಾರ ಅವರು ಪ್ರತಿಯಾಗಿ ನೀರು ಬೇಕು ಅಂತ ಅರ್ಜಿ ಹಾಕಿದೆ.
ಅದು ಸುಪ್ರೀಂಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ಅದಕ್ಕೂ ನಾನು ಹೋರಾಟ ಮಾಡ್ತೀನಿ. ನೀರಾವರಿ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ನೀರಾವರಿ ಯೋಜನೆಗಳಿಗಾಗಿ ನಾನು ಸದಾ ಹೋರಾಟ ಮಾಡೋಕೆ ಸಿದ್ದ ಅಂತ ಕಾಂಗ್ರೆಸ್ ನಾಯಕರಿಗೆ ದೇವೇಗೌಡರು ತಿರುಗೇಟು ನೀಡಿದರು.
Bank Job: ಬ್ಯಾಂಕ್ʼನಲ್ಲಿ ಕೆಲಸ ಮಾಡಲು ಬಯಸಿದವರಿಗೆ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ ಇಲ್ಲ
ನಾನು ಭದ್ರಾ ಮೇಲ್ದಂಡೆಗೆ ಅನುಮತಿ ಕೊಡಿ ಅಂತ ನೀರಾವರಿ ಮಂತ್ರಿಗೆ ಪತ್ರ ಬರೆದಿದ್ದೇನೆ. ಭದ್ರಾ ಯೋಜನೆ ಬಗ್ಗೆಯೂ ನಾನು ಕುಳಿತುಕೊಳ್ಳೊಲ್ಲ. ಅದರ ಬಗ್ಗೆ ಹೋರಾಟ ಮಾಡ್ತೀನಿ ಅಂತ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟರು.