ಬೆಂಗಳೂರು : ರಾಜ್ಯದಲ್ಲಿ ತಳಮಟ್ಟದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಕಾರ್ಯ ನಡೀತಿದ್ದು, ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮ ನಡೆಯಿತು. ಗವಿಪುರದಲ್ಲಿ ನಡೆದ ಬಸವನಗುಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಪರಿಷತ್ ಶಾಸಕ ಟಿ.ಎ.ಶರವಣ ಅವರು ಭಾಗಿಯಾಗಿದ್ದರು.
ಜ್ಯೋತಿ ಬೆಳಗುವ ಮೂಲಕ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಬೂತ್ ಸಮಿತಿ ರಚನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪರಿಷತ್ ಶಾಸಕ ಟಿ.ಎ.ಶರವಣ ಅವರು, ಬಸವನಗುಡಿಯಲ್ಲಿ ಜೆಡಿಎಸ್ ಬಾವುಟ ಹಾರಿಸೋಕೆ ಅವಿರತ ಶ್ರಮ ಪಡುತ್ತಿದ್ದೇವೆ, ಈ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುವುದು ಎಂದರು. ಇನ್ನೂ ಬೆಂಗಳೂರು ವಿಭಜನೆ ಮತ್ತು ಮೆಟ್ರೋ ದರ ಏರಿಕೆ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ದ ಕಿಡಿಕಾರಿದರು.
ಕೆಂಪೇಗೌಡರು ಕಟ್ಟಿದಂತಹ ಬೆಂಗಳೂರನ್ನು ಸರ್ಕಾರ ವಿಭಜನೆ ಮಾಡಲು ಹೊರಟಿದೆ. ಬೆಂಗಳೂರು ವಲಯ ವಿಭಜನೆ ಮತ್ತು ಬಜೆಟ್ ಕುರಿತಂತೆ ನಾವು ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹ ಮಾಡುವಂತ ಕೆಲಸ ಮಾಡುತ್ತಿದ್ದೇವೆ. ಈ ಜನಾಭಿಪ್ರಾಯವನ್ನು ಬಜೆಟ್ ಅಧಿವೇಶನದಲ್ಲಿ ಜನರ ಮುಂದಿಡುತ್ತೇವೆ ಎಂದರು. ಕಾರ್ಯಕ್ರಮದಲ್ಲಿ ಜೆಡಿಎಸ್ ನ ಮುಖಂಡರು ಭಾಗಿಯಾಗಿದ್ದರು.