ಬೆಂಗಳೂರು:- ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ.
DBOSS ಫ್ಯಾನ್ಸ್ ಗೆ ಬಿಗ್ ಶಾಕ್: ಹುಟ್ಟುಹಬ್ಬದ ದಿನವೇ ನಟ ದರ್ಶನ್ ಬ್ಯಾನರ್ ತೆರವು!
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು.
ಎಲ್ಆರ್ ಶಿವರಾಮೇಗೌಡ ಅವರು ಇತ್ತೀಚಿಗೆ ಬಿಜೆಪಿ ಸೇರಿದ್ದರು. ಇದೀಗ ಮರಳಿ ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದ ಬ್ರಿಜೇಶ್ ಕಾಳಪ್ಪ ಕೂಡ ಮರಳಿ ಮಾತೃ ಪಕ್ಷಕ್ಕೆ ವಾಪಸ್ ಆಗಿದ್ದಾರೆ.
ಎಲ್ ಆರ್ ಶಿವರಾಮೇಗೌಡ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ವೇದಿಕೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು. ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇದು ಎಲ್ ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದ್ದವು.