ಬೆಂಗಳೂರು:- ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು , ಯಾವುದೇ ಕ್ಷಣದಲ್ಲಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು.
ಬೆಳಿಗ್ಗೆ ಎದ್ದಾಕ್ಷಣ ಫೋನ್ ನೋಡುತ್ತೀರಾ!? ಹುಷಾರ್, ಈ ಸಮಸ್ಯೆ ಗ್ಯಾರಂಟಿ!
ಈ ವೇಳೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ
ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.