ಮಂಡ್ಯ :- ಮದ್ದೂರು ತಾಲ್ಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿರುವ ಲಕ್ಷ್ಮೀದೇವಿ ಅವರನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶಿಸಿದ್ದಾರೆ.
ಮದ್ದೂರು ತಾಲ್ಲೂಕಿನ ಕಸಬಾ ಹೋಬಳಿಯ ಭೀಮನಕೆರೆ ಗ್ರಾಮದ ಸರ್ವೆ ನಂಬರ್ 121/3ರ 2 ಎಕರೆ 4 ಗುಂಟೆ ಭೂಮಿಗೆ ಸಂಬಂಧಪಟ್ಟಂತೆ ಕಾಲಂ 11ರಲ್ಲಿದ್ದ ಋಣಭಾರವನ್ನು ತೆಗೆದು ಹಾಕಿ ಕರ್ತವ್ಯ ಲೋಪವೆಸಗಿದ್ದರು.
ಈ ಬಗ್ಗೆ ಸಾರ್ವಜನಿಕರು ತಿಂಗಳ ಹಿಂದೆ ಮದ್ದೂರು ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದರು.
ಈ ಬಗ್ಗೆ ಉಪ ವಿಭಾಗಾಧಿಕಾರಿ ಜಿಲ್ಲಾಧಿಕಾರಿಯವರಿಗೆ ವರದಿ ಸಲ್ಲಿಸಿದ್ದರಿಂದ ಜಿಲ್ಲಾಧಿಕಾರಿಯು ಲಕ್ಷ್ಮೀದೇವಿ ಅವರನ್ನು ಅಮಾನತುಗೊಳಿಸಿ ಆದ್ದೇಶಿಸಿದ್ದಾರೆ.