ತುಮಕೂರು: ಕರ್ನಾಟಕದಲ್ಲಿ ಮತ್ತೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕುಣಿಗಲ್ ತಾಲೂಕಿನ ಕಂಪ್ಲಾಪುರ ಗ್ರಾಮದಲ್ಲಿ ನಡೆದಿದೆ.
ಬಾದಾಮಿ ತಾಲೂಕಿನ ಗುಳೇದಗುಡ್ಡ ಮೂಲದ ಮಹಿಳೆ ಕಸ್ತೂರಿ (43) ಸಾವನ್ನಪ್ಪಿದ ದುರ್ಧೈವಿಯಾಗಿದ್ದು, ಬಸವರಾಜು, ಶಾಂತಮ್ಮ, ವಿಶ್ವನಾಥ್, ಪಾವನಿಗೆ ಗಂಭೀರ ಗಾಯಗಳಾಗಿವೆ.
ಸಂಪತ್ತು ನಿಮ್ಮನ್ನು ಹುಡುಕಿಕೊಂಡು ಬರಬೇಕಾ.? ಹಾಗಿದ್ರೆ ಈ ದಿನಗಳಲ್ಲಿ ಪೊರಕೆ ಖರೀದಿಸಬಾರದು.!
ಮೈಸೂರಿಗೆ ತೆರಳುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಗಾಯಾಳುಗಳಿಗೆ ಕುಣಿಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.