ವಾಷಿಂಗ್ಟನ್: ಎರಡು ದಿನಗಳ ಕಾಲ ಅಮೆರಿಕಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಎಲಾನ್ ಮಸ್ಕ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಡೊನಾಲ್ಡ್ ಟ್ರಂಪ್, ಮೋದಿ ಅವರು ಎಲಾನ್ ಮಸ್ಕ್ ಅವರನ್ನು ಏಕೆ ಭೇಟಿಯಾದರು ಎಂದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಎಲಾನ್ ಮಸ್ಕ್ ಪ್ರಧಾನಿ ನರೇಂದ್ರ ಮೋದಿಯವರನ್ನು ಅಮೆರಿಕದ ಸಿಇಒ ಅಥವಾ ಅಮೆರಿಕ ಸರ್ಕಾರದ ಪ್ರತಿನಿಧಿಯಾಗಿ ಭೇಟಿಯಾದರೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ನನಗೆ ಗೊತ್ತಿಲ್ಲ” ಎಂದಿದ್ದಾರೆ.
“ಅವರಿಬ್ಬರು ಭೇಟಿಯಾದರು. ಅವರು ಭಾರತದಲ್ಲಿ ವ್ಯಾಪಾರ ಮಾಡಲು ಬಯಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಎಲಾನ್ ಮಸ್ಕ್ ಕಂಪೆನಿಯನ್ನು ನಡೆಸುತ್ತಿರುವುದರಿಂದ ಭೇಟಿಯಾಗಿರಬಹುದು”, ಎಂದು ಟ್ರಂಪ್ ಪ್ರತಿಕ್ರಿಯಿಸಿದ್ದಾರೆ.