ಹುಬ್ಬಳ್ಳಿ: ಸಾರ್ವಜನಿಕರು ಕಡಿಮರ ಮೊತ್ತದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ತೆಗೆದುಕೊಳ್ಳುತ್ತಿದ್ದರು. ಆದ್ರೆ ರಾಜ್ಯ ಸರ್ಕಾರ ಈಗ ಮತ್ತೇ ಶಾಕ್ ನೀಡಿದೆ. ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಫೆಬ್ರುವರಿ 4 ರಂದು ಆದೇಶ ಹೊರಡಿಸಿದೆ. ಈ ಹಿಂದೆ ಕೇವಲ ಐದು ರೂಪಾಯಿಗೆ ಸಿಗುತ್ತಿದ್ದ ಪ್ರಮಾಣ ಪತ್ರ, ಇದೀಗ 50 ರೂಪಾಯಿಗೆ ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ಶುಲ್ಕ ಏರಿಕೆ ಬಿಸಿ ತಟ್ಟಿದೆ.
ಹೌದು,,, ಜನನ, ಮರಣ ಪ್ರಮಾಣ ಪತ್ರ ಅತ್ಯವಶ್ಯ ದಾಖಲೆಗಳಲ್ಲಿ ಒಂದಾಗಿದೆ. ಮಕ್ಕಳನ್ನು ಶಾಲೆಗೆ ಸೇರಿಸಲು, ಆಧಾರ್ ಕಾರ್ಡ್ ಮಾಡಿಸಲು ಹಾಗೂ ಇನ್ನಿತರ ಸಂದರ್ಭದಲ್ಲಿ ಜನನ ಪ್ರಮಾಣ ಪತ್ರ ಬೇಕೇ ಬೇಕು. ಇನ್ನೂ ಮೃತಪಟ್ಟ ವ್ಯಕ್ತಿಯ ಆಸ್ತಿ ಮತ್ತು ಇತರೆ ದಾಖಲಾತಿಗಳು ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಲು ಮರಣ ಪ್ರಮಾಣ ಪತ್ರ ಕಡ್ಡಾಯ. ಹೀಗಾಗಿ ಜನರು ಗ್ರಾಮ ಪಂಚಾಯಿತಿ, ಕಂದಾಯ ಇಲಾಖೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮೂಲಕ ಈ ಪ್ರಮಾಣ ಪತ್ರಗಳನ್ನು ತೆಗೆದುಕೊಳ್ಳುತ್ತಾರೆ.
ಸಂಪತ್ತು ನಿಮ್ಮನ್ನು ಹುಡುಕಿಕೊಂಡು ಬರಬೇಕಾ.? ಹಾಗಿದ್ರೆ ಈ ದಿನಗಳಲ್ಲಿ ಪೊರಕೆ ಖರೀದಿಸಬಾರದು.!
ಇನ್ನು ಈ ಪ್ರಮಾಣ ಪತ್ರಗಳನ್ನು ಜನನ ಅಥವಾ ಮರಣ ಸಂಭವಿಸಿದ 21 ದಿನಗಳ ಒಳಗಾಗಿ ಅರ್ಜಿ ಸಲ್ಲಿಸಿ ಪಡೆಯಬೇಕು. ಆಗ ಒಂದು ಪ್ರತಿ ಉಚಿತವಾಗಿ ನೀಡಲಾಗುತ್ತದೆ. 21 ದಿನ ದಾಟಿದ್ದಲ್ಲಿ 30 ದಿನ ಒಳಗಾಗಿ ಅರ್ಜಿ ಸಲ್ಲಿಸಬೇಕು. ಇದಕ್ಕೆ ಈ ವರೆಗೆ ದಿನಕ್ಕೆ ಎರಡು ರೂಪಾಯಿ ದಂಡ ಪಾವತಿಸಬೇಕಿತ್ತು. ಆದರೀಗ 20 ರೂಪಾಯಿ ಪಾವತಿಸಬೇಕಿದೆ. 30 ದಿನಗಳಿಂದ ಒಂದು ವರ್ಷದ ಒಳಗೆ ಪ್ರಮಾಣ ಪತ್ರ ಪಡೆಯಬೇಕಾದಲ್ಲಿ ಐದು ರೂಪಾಯಿ ದಂಡ ಪಾವತಿಸಬೇಕಿತ್ತು.
ಇದೀಗ 50 ರೂ. ಪಾವತಿಸಬೇಕಾಗಿದೆ. ಇದು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಿದೆ. ಸದ್ಯ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯ ಕಚೇರಿಗಳಲ್ಲಿ ಪ್ರತಿ ತಿಂಗಳು ಸುಮಾರು 450 ರಿಂದ 500 ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಬರುತ್ತವೆ. ಮತ್ತೆ ಅಷ್ಟೇ ಪ್ರಮಾಣದ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ಈ ಬಗ್ಗೆ ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ ಏನು ಹೇಳಿದ್ದಾರೆ ಕೇಳಿ.
ಒಟ್ಟಿನಲ್ಲಿ ಹೇಳುವುದಾದರೆ ರಾಜ್ಯ ಸರ್ಕಾರ ಒಂದಲ್ಲಾ ಒಂದು ರೀತಿಯಲ್ಲಿ ಶುಲ್ಕಗಳನ್ನು ಏರಿಸುತ್ತ ಬಂದಿದೆ. ಈಗ ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಏಕಾಏಕಿ 50 ರೂಪಾಯಿ ಹೆಚ್ಚು ಮಾಡಿದ್ದು, ಸಾರ್ವಜನಿಕರ ಕಂಗೆಣ್ಣಿಗೆ ಗುರಿಯಾಗಿದೆ.