ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಗೆ ನಗರದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಜನರು ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದರು. ಬಳಿಕ ದರ ಪರಿಷ್ಕರಣೆ ಮಾಡಿದ್ದೇವೆ ಅಂತಾ ಹೇಳಿದ್ದ ನಮ್ಮ ಮೆಟ್ರೋಗೆ ಪ್ರಯಾಣಿಕರ ದಿಢೀರ್ ಇಳಿಕೆಯ ಬಿಸಿ ತಟ್ಟಿತ್ತು. ಇದೀಗ ಈ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದು,
ಮೆಟ್ರೋ ದರ ನಿಗದಿ ಮಾಡುವ ಕಮಿಟಿಯನ್ನ ನೇಮಕ ಮಾಡೋದು ಕೇಂದ್ರ ಸರ್ಕಾರ. ಆ ಕಮಿಟಿಯಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿ, ಒಬ್ಬರು ರಾಜ್ಯ ಸರ್ಕಾರದವರು ಇರುತ್ತಾರೆ. ಮೆಟ್ರೋ ಸ್ವಾಯತ್ತ ಸಂಸ್ಥೆ ಆದರೂ ಮೆಟ್ರೋವನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಸೇರಿ ನಡೆಸುತ್ತವೆ ಎಂದರು.
ಸಂಪತ್ತು ನಿಮ್ಮನ್ನು ಹುಡುಕಿಕೊಂಡು ಬರಬೇಕಾ.? ಹಾಗಿದ್ರೆ ಈ ದಿನಗಳಲ್ಲಿ ಪೊರಕೆ ಖರೀದಿಸಬಾರದು.!
ಬೆಲೆ ನಿಗದಿ ಮಾಡಿ, ಏರಿಕೆ ಮಾಡಿ ಅಂತ ನಾವು ಪ್ರಪೋಸಲ್ ಕೊಡುತ್ತೇವೆ. ಆದರೆ ಬೆಲೆ ನಿಗದಿ ಮಾಡೋದು ಕಮಿಟಿ ಅವರು. ಆ ಕಮಿಟಿಯ ಅಧ್ಯಕ್ಷರನ್ನು ಆಯ್ಕೆ ಮಾಡೋದು ಕೇಂದ್ರ ಸರ್ಕಾರದವರು ಅನ್ನೋ ಮೂಲಕ ಕೇಂದ್ರ ಸರ್ಕಾರವೇ ಮೆಟ್ರೋ ದರ ಏರಿಕೆ ಮಾಡಿರೋದು ಎಂದು ಪರೋಕ್ಷವಾಗಿ ಆರೋಪ ಮಾಡಿದರು.