ದೊಡ್ಡಬಳ್ಳಾಪುರ:- ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿದುರ್ಗಾ ಬಳಿ ಜರುಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದರೆ, ಮತ್ತಿಬ್ಬರಿಗೆ ಗಾಯವಾಗಿದೆ. ಬೆಂಗಳೂರು ಮೂಲದ ವಸಂತ್ ( 30 ) ಮತ್ತು ಚೇತನ್ ( 29 ) ಮೃತ ದುರ್ದೈವಿಗಳು. ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಕಾರು ಬರುತ್ತಿತ್ತು. ಈ ವೇಳೆ ಮುಂದೆ ಹೋಗ್ತಿದ್ದ ವಾಹನ, ಒವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬರ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಮತ್ತು ಕಾರಿನ ಮುಂಬಾಗ ಜಖಂ ಆಗಿದೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.