ವಡೋದರಾದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಕಳೆದ ವರ್ಷದ ಫೈನಲಿಸ್ಟ್ಗಳಾದ ಈ ಎರಡು ತಂಡಗಳ ನಡುವಿನ ಪಂದ್ಯದ ಮೇಲೆ ಭಾರಿ ನಿರೀಕ್ಷೆಯಿದೆ. ಆರ್ಸಿಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡೂ ತಂಡಗಳು ತಮ್ಮ ಆಡುವ ಬಳಗದಲ್ಲಿ ಬದಲಾವಣೆಗಳನ್ನು ಮಾಡಿವೆ.
2025ರ ಮಹಿಳಾ ಪ್ರೀಮಿಯರ್ ಲೀಗ್ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗಿವೆ.
ಕಳೆದ ಬಾರಿ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಆರ್ಸಿಬಿ ಮಣಿಸಿ ಕಪ್ ಗೆದ್ದಿತ್ತು. ಈ ಮೂಲಕ ಆರ್ಸಿಬಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈಗ ಅದೇ ತಂಡದ ವಿರುದ್ಧ ಲೀಗ್ ಹಂತದ ಪಂದ್ಯದಲ್ಲಿ ಆರ್ಸಿಬಿ ಕಣಕ್ಕಿಳಿಯುತ್ತಿದೆ.
ಟಾಸ್ ಗೆದ್ದ ಆರ್ಸಿಬಿ ನಾಯಕಿ ಸ್ಮೃತಿ ಮಂದಾನ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫಸ್ಟ್ ಬ್ಯಾಟಿಂಗ್ಗೆ ಇಳಿದಿದೆ
ಆರ್ಸಿಬಿ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ ಆಗಿದೆ. ಏಕ್ತಾ ಆರ್ಸಿಬಿ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಇದು ಆರ್ಸಿಬಿಗೆ ಆನೆಬಲ ತಂದುಕೊಟ್ಟಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ವಿರುದ್ಧ ಗೆದ್ದು ಬೀಗಿದ್ದ ಆರ್ಸಿಬಿ ಡೆಲ್ಲಿ ವಿರುದ್ಧ ಗೆಲ್ಲೋ ತವಕದಲ್ಲಿದೆ.