ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರ ಬಂದಿದ್ದು ನಿಧಾನಕ್ಕೆ ಸಾಮಾನ್ಯ ಜೀವನ ಶೈಲಿಗೆ ಮರಳುತ್ತಿದ್ದಾರೆ. ಕುಟುಂಬ ಸದಸ್ಯರ ಜೊತೆ ಹಬ್ಬಗಳಲ್ಲಿ ಭಾಗಿಯಾಗುತ್ತಿರುವ ನಟ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಸಿಂಪಲ್ ಇದೀಗ ತಮ್ಮ ಅಭಿಮಾನಿಗಳು ಮಾಡಿರುವ ಸಾಮಾಜಿಕ ಕಾರ್ಯದ ಚಿತ್ರಗಳನ್ನು ಹಂಚಿಕೊಂಡು ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ತಮ್ಮ ಅಭಿಮಾನಿಗಳು ಮಾಡಿರುವ ಸಮಾಜ ಸೇವೆಯ ಹಲವು ಚಿತ್ರಗಳನ್ನು ನಟ ದರ್ಶನ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಎಲ್ಲ ಚಿತ್ರಕ್ಕೂ ‘ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಹೃದಯಪೂರ್ವಕ ಧನ್ಯವಾದಗಳು’ ಎಂದು ಕ್ಯಾಪ್ಷನ್ ನೀಡಿದ್ದಾರೆ. ಅಭಿಮಾನಿಗಳು ಮಾಡಿರುವ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ, ಆಸ್ಪತ್ರೆಯಲ್ಲಿ ಆರೋಗ್ಯ ಕಿಟ್ ವಿತರಣೆ, ಅನಾಥಾಶ್ರಮ, ವೃದ್ಧಾಶ್ರಮಗಳಲ್ಲಿ ಭೋಜನ ವ್ಯವಸ್ಥೆ, ಉಚಿತ ಅನ್ನದಾನ, ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರಗಳ ಫೋಟೊಗಳನ್ನು ನಟ ದರ್ಶನ್ ಹಂಚಿಕೊಂಡಿದ್ದಾರೆ. ಸುಮಾರು 18 ವಿವಿಧ ಕಾರ್ಯಕ್ರಮಗಳನ್ನು ದರ್ಶನ್ ಹಂಚಿಕೊಂಡಿದ್ದಾರೆ.
ದರ್ಶನ್ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ತಮ್ಮ ಹುಟ್ಟುಹಬ್ಬದಂದು ಸಮಾಜ ಸೇವೆ ಮಾಡುವಂತೆ ಅಭಿಮಾನಿಗಳಿಗೆ ಕರೆ ನೀಡಿದ್ದರು. ದರ್ಶನ್ ಕರೆಗೆ ಓಗೊಟ್ಟು ಅಭಿಮಾನಿಗಳು ಸಮಾಜ ಸೇವೆ ಮಾಡಿದ್ದು, ಅದರ ಚಿತ್ರಗಳನ್ನು ನಟ ದರ್ಶನ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.