ಚಿತ್ರದುರ್ಗ: ಜಿಲ್ಲೆಯಲ್ಲಿ ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಗಣನೀಯವಾಗಿ ಹೆಚ್ಚಳ ಮಾಡಲು ಅಗತ್ಯ ಪೂರ್ವಸಿದ್ಧತೆ ಹಾಗೂ ಕ್ರಮವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಎಸ್ಎಸ್ಎಲ್ಸಿ ಶೈಕ್ಷಣಿಕ ಪ್ರಗತಿ ಹಾಗೂ ಪೂರ್ವ ಸಿದ್ಧತೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ ಪರೀಕ್ಷೆಗೆ ಇನ್ನು ಕೇವಲ 30 ದಿನಗಳು ಮಾತ್ರ ಬಾಕಿ ಉಳಿದಿದ್ದು, ಪರೀಕ್ಷಾ ಸಿದ್ಧತೆಗೆ ಅಮೂಲ್ಯವಾದ ಸಮಯವಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಶ್ರಮವಹಿಸಿ, ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಬಹಳ ಎಚ್ಚರಿಕೆಯಿಂದ ಕಲಿಕಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಜಿಲ್ಲೆಗೆ ಉತ್ತಮ ಹಾಗೂ ಹೆಚ್ಚಿನ ಫಲಿತಾಂಶ ತರುವಲ್ಲಿ ತಮ್ಮಗಳ ಜವಾಬ್ದಾರಿ ಬಹಳವಿದೆ. ಆದ್ದರಿಂದ ಬಹಳ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಸೂಚಿಸಿದ ಅವರು, ಫಲಿತಾಂಶ ಹೆಚ್ಚಳಕ್ಕೆ ಜಿಲ್ಲೆಯ ಆರು ತಾಲೂಕುಗಳಲ್ಲಿ ಸಿದ್ಧತೆ ಮಾಡಿಕೊಂಡ ಬಗ್ಗೆ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಒಂಟಿ ಮನೆ ನಿರ್ಮಾಣಕ್ಕಾಗಿ ಫೆ. 25ರ ಒಳಗಾಗಿ ಅರ್ಜಿ ಸಲ್ಲಿಸಿ: ತುಷಾರ್ ಗಿರಿ ನಾಥ್
ಕಳೆದ ಸಾಲಿಗಿಂತ ಪ್ರಸಕ್ತ ಸಾಲಿನಲ್ಲಿ ಶೇ.100ರಷ್ಟು ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಉತ್ತಮ ಫಲಿತಾಂಶ ಪಡೆದ ಶೇಕಡಾವಾರು ನೋಡಿಕೊಂಡು ಅಂತಹ ಅಧಿಕಾರಿಗಳಿಗೆ, ಮುಖ್ಯ ಶಿಕ್ಷಕರಿಗೆ ಮತ್ತು ಶಿಕ್ಷಕರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಗುವುದು. ಪರೀಕ್ಷಾ ಫಲಿತಾಂಶದ ಹೆಚ್ಚಳದಲ್ಲಿ ನಿರ್ಲಕ್ಷೆ ವಹಿಸುವ ಅಧಿಕಾರಿಗಳು ಮತ್ತು ಶಿಕ್ಷಕರಿಗೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಡಯಟ್ ಪ್ರಾಂಶುಪಾಲ ಎಂ.ನಾಸಿರುದ್ದಿನ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿವೈಪಿಸಿ ಗಳು, ಬಿಆರ್ ಸಿ ಹಾಗೂ ವಿಷಯ ಪರಿವೀಕ್ಷಕರು ಮತ್ತು ಡಯಟ್ನ ಸಿಬ್ಬಂದಿಗಳು ಉಪಸ್ಥಿತರಿದ್ದರು.